alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಎದುರಲ್ಲೇ 18 ಲಕ್ಷ ರೂ. ಲೂಟಿ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ

ಪಂಜಾಬ್ ನ ಲುಧಿಯಾನಾದಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು 18 ಲಕ್ಷ ರೂಪಾಯಿ ಲೂಟಿ ಮಾಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕ್ ನ ಎದುರೇ ಈ ಘಟನೆ ನಡೆದಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿದ ದರೋಡೆಕೋರರು ಹಣದ ಸಮೇತ ಪರಾರಿಯಾಗಿದ್ದಾರೆ.

ಲುಧಿಯಾನಾ-ಫಿರೋಜ್ಪುರ ರಸ್ತೆಯಲ್ಲಿ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯೊಬ್ಬ ಬ್ಯಾಗ್ ನಲ್ಲಿ ಹಣ ತುಂಬಿಸಿಕೊಂಡು ಬ್ಯಾಂಕ್ ಗೆ ಜಮಾ ಮಾಡಲು ತಂದಿದ್ದ. ಆತನ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ.

ಹಣವಿದ್ದ ಬ್ಯಾಗ್ ಆತನ ಕೈಜಾರಿದೆ. ಕೂಡಲೇ ಅದನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಲೂಟಿಯಾದ 18 ಲಕ್ಷ ರೂಪಾಯಿ ಖಾಸಗಿ ಸೆಕ್ಯೂರಿಟಿ ಏಜೆನ್ಸಿಯೊಂದಕ್ಕೆ ಸೇರಿದ ಹಣ ಎನ್ನಲಾಗ್ತಿದೆ. ನಿನ್ನೆ ಈ ದರೋಡೆ ನಡೆದಿದ್ದು, ಪೊಲೀಸರು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...