alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಕಲ್ಲು ತೂರಾಟ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ವಿವಿಧ ಸಂಘಟನೆಗಳು ತಮಿಳನಾಡು ಬಂದ್ ಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮೊದಲೇ ತಮಿಳುನಾಡಿಗೆ ತೆರಳಿದ್ದ ಬಸ್ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿ, ತಮಿಳಿನಲ್ಲಿ ಕಾವೇರಿ ನಮ್ಮದೇ ಎಂದು ಬಸ್ಸಿನ ಮೇಲೆ ಬರೆದಿದ್ದಾರೆ.

ಚಾಲಕ ಬಸವರಾಜ್, ನಿರ್ವಾಹಕ ಗುರುಸಂಗಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕಡಲೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಚಾಲಕ, ನಿರ್ವಾಹಕರನ್ನು ರಕ್ಷಿಸಿ ಹಾಗೂ ಬಸ್ ಅನ್ನು ಠಾಣೆಗೆ ಕೊಂಡೊಯ್ದಿದ್ದಾರೆ.

ದಾಳಿ ಮಾಡಿದ ಸುಮಾರು 40 ಮಂದಿಯಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಬಂದ್ ಹಿನ್ನಲೆಯಲ್ಲಿ ಕರ್ನಾಟಕದ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...