alex Certify
ಕನ್ನಡ ದುನಿಯಾ       Mobile App
       

Kannada Duniya

Breaking News : ‘ಮೂರು ದಿನಗಳ ಕಾಲ ನೀರು ಬಿಡಿ’ – ಸುಪ್ರೀಂ ಕೋರ್ಟ್

download

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ.

ಮೂರು ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದೆ. ಎರಡೂ ರಾಜ್ಯಗಳ ವಾದ-ವಿವಾದ ಆಲಿಸಿದ ಸುಪ್ರೀಂ ಕೋರ್ಟ್, ಒಕ್ಕೂಟ ವ್ಯವಸ್ಥೆಯನ್ನು ಉಳಿಸಬೇಕಿದೆ. ರಾಜ್ಯಗಳು ಪರಸ್ಪರ ಸಹಕರಿಸಬೇಕಿದೆ ಎಂದು ಹೇಳಿದೆ.

ಆದರೆ ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವ ಪರಿಸ್ಥಿತಿಯಿದ್ದು, ನೀರು ಹರಿಸಲು ಸಾಧ್ಯವಿಲ್ಲವೆಂದು ತಮ್ಮ ವಾದ ಮಂಡಿಸಿದ್ದು, ಇದಕ್ಕೆ ಮನ್ನಣೆ ನೀಡದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ನಿಮ್ಮ ನಿರ್ಣಯ ಏನೇ ಇದ್ದರೂ ಸುಪ್ರೀಂ ಕೋರ್ಟ್ ಸೂಚನೆಯನ್ನು ಪಾಲಿಸಲೇಬೇಕು. ಆದೇಶದಂತೆ ಮೂರು ದಿನಗಳ ಕಾಲ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕು ಎಂದು ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ. ಕರ್ನಾಟಕ ಸರ್ಕಾರ ಈಗ ಯಾವ ತೀರ್ಮಾನ ಕೈಗೊಳ್ಳುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...