alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಲೂಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಂದ ಗನ್ ಲೈಸೆನ್ಸ್ ಗೆ ಅರ್ಜಿ

ಬಹು ಕೋಟಿ ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್  ಗೆ ಜೈಲು ಶಿಕ್ಷೆ ವಿಧಿಸಿರುವ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ತಮ್ಮ ಹಾಗೂ ಇಬ್ಬರು ಮಕ್ಕಳ ರಕ್ಷಣೆಗಾಗಿ ಗನ್ ಲೈಸೆನ್ಸ್ ಕೋರಿ ಅರ್ಜಿ ಸಲ್ಲಿಸಿರುವ ಸಂಗತಿ ಕುತೂಹಲಕ್ಕೆ ಕಾರಣವಾಗಿದೆ.

ಬಹು ಕೋಟಿ ಮೇವು ಹಗರಣದ ಹಲವು ಪ್ರಕರಣಗಳ ಪೈಕಿ ಒಂದು ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೂರೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದ್ದು, ತೀರ್ಪಿಗೂ ಮುನ್ನ ಲಾಲೂ ಪರ ಹಲವರು ತಮ್ಮ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದರೆಂದು ಶಿವಪಾಲ್ ಸಿಂಗ್ ಹೇಳಿದ್ದು ಗಮನಾರ್ಹ ಸಂಗತಿ.

ರಾಂಚಿಯ ಕಾಂಕೆ ರಸ್ತೆಯಲ್ಲಿನ 27 ಜಡ್ಜ್ ಕಾಲೋನಿ ನಿವಾಸಿಯಾಗಿರುವ ನ್ಯಾಯಾಧೀಶ ಶಿವಪಾಲ್ ಸಿಂಗ್, ಕಳೆದ ಅಕ್ಟೋಬರ್ ನಲ್ಲಿಯೇ ತಮ್ಮ ಹಾಗೂ ಪುತ್ರ ಮತ್ತು ಪುತ್ರಿಯ ಗನ್ ಲೈಸೆನ್ಸ್ ಗಾಗಿ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಶುಲ್ಕವನ್ನೂ ಪಾವತಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡದ ಜಿಲ್ಲಾಧಿಕಾರಿಗಳ ಕಛೇರಿ ಸಿಬ್ಬಂದಿ, ನ್ಯಾಯಾಧೀಶರ ಅರ್ಜಿಯನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...