alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರ ಬಂಧನ

ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಂದುವರೆದಿದೆ. ಹಿಮಾಚಲ ಪ್ರದೇಶದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇವ್ರ ವಿರುದ್ಧ 12ನೇ ತರಗತಿ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪವಿದೆ. ಕೈಬರಹದ ಪ್ರಶ್ನೆ ಪತ್ರಿಕೆಯನ್ನು ಇವರು ಲೀಕ್ ಮಾಡಿದ್ದರು ಎನ್ನಲಾಗಿದೆ. ಒಬ್ಬ ಶಿಕ್ಷಕ, ಕ್ಲರ್ಕ್ ಹಾಗೂ ಸಹ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಎಲ್ಲ ಅರ್ಜಿಯನ್ನೂ ವಜಾ ಮಾಡಿದೆ. ಇದು ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದರು. ಸಿಬಿಎಸ್ಸಿ 12ನೇ ತರಗತಿ ಅರ್ಥಶಾಸ್ತ್ರ ಹಾಗೂ 10ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸಿಬಿಎಸ್ಸಿ 12ನೇ ತರಗತಿ ಅರ್ಥಶಾಸ್ತ್ರ ಮರು ಪರೀಕ್ಷೆಗೆ ಮುಂದಾಗಿದೆ.

ಏಪ್ರಿಲ್ 25ರಂದು ಮರು ಪರೀಕ್ಷೆ ನಡೆಯಲಿದೆ. ಆದ್ರೆ ಇದನ್ನು ಪ್ರಶ್ನಿಸಿ ಕೋರ್ಟ್ ನಲ್ಲಿ ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ಪರೀಕ್ಷೆ 25ರಂದು ನಡೆಯಲಿದೆ. 10ನೇ ತರಗತಿ ಗಣಿತ ಮರು ಪರೀಕ್ಷೆ ನಡೆಸದಿರಲು ಬೋರ್ಡ್ ನಿರ್ಧರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...