alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡು ಹಾರಿಸಿದವ ಕ್ಯಾಮೆರಾದಲ್ಲಿ ಸೆರೆ…?

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಗುರಿಯಾಗಿಸಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಸಂಶಯಾಸ್ಪದ ವ್ಯಕ್ತಿಯ ಫೋಟೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ನವದೆಹಲಿಯ ವಿಠಲ್ ಬಾಯ್ ಪಟೇಲ್ ರಸ್ತೆಯ ಸಿಸಿ ಟಿವಿ ಕ್ಯಾಮೆರಾದಿಂದ ಈ ಚಿತ್ರವನ್ನು ಹೆಕ್ಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಸೋಮವಾರ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿದ್ದಾಗ ಅಪರಿಚಿತ ವ್ಯಕ್ತಿ ಉಮರ್ ಖಾಲಿದ್ ನನ್ನು‌ ತಳ್ಳಾಡಿ ನಂತರ ಗುಂಡು ಹಾರಿಸಿದ್ದ, ಬಳಿಕ ದಾಳಿಗೆ ಬಳಸಿದ್ದ ಆಯುಧವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ.

ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆಯುಧವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಯೂನೈಟೆಡ್ ಎಗೆನೆಸ್ಟ್ ಹೇಟ್ ಸಂಸ್ಥೆ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆ.ಎನ್.ಯು. ವಿದ್ಯಾರ್ಥಿ ಗಳು ಆಗಮಿಸಿದ್ದಾಗ ಗುಂಡಿನ ದಾಳಿ ನಡೆದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...