alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಅರ್ಚಕರ ಅಸಲಿ ಬಣ್ಣ

hyder

ಹೈದರಾಬಾದ್ ದೇವಾಲಯದಲ್ಲಿ ಅರ್ಚಕರು ಮಾಡಿದ ಕೆಲಸ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದನ್ನು ಕಂಡ ಆಡಳಿತ ಮಂಡಳಿ ಮತ್ತು ಭಕ್ತರು ಅಚ್ಚರಿಯಾಗಿದ್ದಾರೆ. ಅಷ್ಟಕ್ಕೂ ಏನಿದು ಘಟನೆ ಎಂಬುದನ್ನು ತಿಳಿಯಲು ಮುಂದೆ ಓದಿ.

ಹೈದರಾಬಾದ್ ನ ಬಲ್ಕಮ್ ಪೇಟೆಯಲ್ಲಿರುವ ಯಲ್ಲಮ್ಮ ದೇವಿ ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗೆ ಕಾಣಿಕೆಯನ್ನು ಅರ್ಪಿಸುತ್ತಾರೆ. ಭಕ್ತರು ಅರ್ಪಿಸುತ್ತಿದ್ದ ಕಾಣಿಕೆ ಇಲ್ಲಿ ಕೆಲಸ ಮಾಡುತ್ತಿದ್ದ ಮೂವರು ಅರ್ಚಕರ ಕೈ ಸೇರುತ್ತಿತ್ತು. ಅರ್ಚಕರು ಕಾಣಿಕೆ ಹುಂಡಿಯಿಂದ ಕಾಣಿಕೆಯನ್ನು ಕಳವು ಮಾಡುತ್ತಿದ್ದರು. ಇದರಿಂದ ಆಡಳಿತ ಮಂಡಳಿಗೆ ತಲೆ ನೋವಾಗಿತ್ತು.

ಕಳ್ಳರನ್ನು ಪತ್ತೆ ಹಚ್ಚಲು ತೀರ್ಮಾನಿಸಿದ ದೇವಾಲಯದ ಆಡಳಿತ ಮಂಡಳಿ, ಅರ್ಚಕರಿಗೆ ಗೊತ್ತಾಗದಂತೆ ದೇವಾಲಯದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದೆ. ಈ ಮೂವರು ಅರ್ಚಕರು ವಾರಕ್ಕೊಮ್ಮೆ ಕಾಣಿಕೆ ಹುಂಡಿಯಿಂದ ಹಣ ಕದಿಯುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಕ್ರಮ ಕೈಗೊಂಡಿರುವ ಆಡಳಿತ ಮಂಡಳಿ ಮೂವರು ಅರ್ಚಕರನ್ನು ವಜಾಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...