alex Certify
ಕನ್ನಡ ದುನಿಯಾ       Mobile App
       

Kannada Duniya

ಗೇಮ್ ಆಡ್ತಿದ್ದ ವೇಳೆ ಮೊಬೈಲ್ ಸ್ಫೋಟ

ಮತ್ತೊಂದು ಮೊಬೈಲ್ ಫೋನ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯಲ್ಲಿ ಮೊಬೈಲ್ ಸ್ಫೋಟಗೊಂಡು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬನ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಮಕ್ಕಳು ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದೆ. ಛತರ್ಪುರ್ ನ ಮತ್ಗಾವನ್ ನಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 9 ವರ್ಷದ ಬಾಲಕ ಹಾಗೂ ಆತನ ಸಹೋದರ ಗಾಯಗೊಂಡಿದ್ದಾರೆ. 108ಗೆ ಕರೆ ಮಾಡಿದ್ದ ಕುಟುಂಬಸ್ಥರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಟವಾಡ್ತಿದ್ದ 9 ವರ್ಷದ ಭೂಪೇಂದ್ರ ಸಿಂಗ್ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಹೋದರನಿಗೆ ಸಣ್ಣಪುಟ್ಟ ಗಾಯಗಳಾಗಿದೆಯಂತೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...