alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರದಿಂದ ಕೇರಳಕ್ಕೆ 100 ಕೋಟಿ ರೂ. ನೆರವು: ಆ.15 ರವರೆಗೂ ಭಾರೀ ಮಳೆ ಸಾಧ್ಯತೆ

ತಿರುವನಂತಪುರಂ: ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿಗೆ ಸಿಲುಕಿರುವ ಕೇರಳಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಿಎಂ ಪಿಣರಾಯಿ ವಿಜಯನ್ ಜತೆಗೂಡಿ ವೈಮಾನಿಕ ಸಮೀಕ್ಷೆ ನಡೆಸಿ, ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದರು. ಈ ವೇಳೆ ಕೇರಳಕ್ಕೆ 100 ಕೋಟಿ ರೂ. ಪರಿಹಾರ ಘೋಷಣೆ ಮಾಡಿದರು.

ಎರ್ನಾಕುಲಂ ಜಿಲ್ಲೆಯ ಪರವುರ್‌ ತಾಲೂಕಿನಲ್ಲಿ ಗಂಜಿ ಕೇಂದ್ರವೊಂದಕ್ಕೆ ಭೇಟಿ ನೀಡಿದ ರಾಜನಾಥ್‌, ಸಂತ್ರಸ್ತರಿಂದ ಅಹವಾಲುಗಳನ್ನು ಸ್ವೀಕರಿಸಿದರು. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಾದ ಎಲ್ಲಾ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಪ್ರಕೃತಿ ವಿಕೋಪ ಪರಿಹಾರ ಕಾರ್ಯಕ್ಕಾಗಿ ಮೊದಲ ಹಂತದಲ್ಲಿ ಕೇಂದ್ರ ಸರ್ಕಾರ 80.25ಕೋಟಿ ರೂ. ಬಿಡುಗಡೆ ಮಾಡಿದೆ. ಈಗ ಪರಿಹಾರ ಕಾರ್ಯಕ್ಕಾಗಿ ಹೆಚ್ಚುವರಿಯಾಗಿ 100 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಇಡುಕ್ಕಿ ಮತ್ತು ಇದಮಲಯಾರ್‌ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಆತಂಕ ಕಡಿಮೆಯಾಗಿದೆ. ಆದರೆ ಕೇರಳದ ಹಲವು ಭಾಗಗಳಲ್ಲಿ ಆಗಸ್ಟ್‌ 15ರವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತಗಳು ರಕ್ಷಣಾ ಕ್ರಮಕ್ಕೆ ಸನ್ನದ್ಧವಾಗಿವೆ. ಇಡುಕ್ಕಿ, ವೈನಾಡ್‌, ಕಣ್ಣೂರ್‌, ಎರ್ನಾಕುಲಂ, ಪಾಲಕ್ಕಾಡ್‌ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ, ಕರ್ನಾಟಕ, ಉತ್ತರಾಖಂಡ, ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...