alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತರ್ಜಾತಿ ವಿವಾಹವಾದವರಿಗೆ ಸಿಗುತ್ತೇ 2.5 ಲಕ್ಷ ರೂ.

ನವದೆಹಲಿ: ಕೇಂದ್ರ ಸರ್ಕಾರ ದಲಿತ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತೊಂದು ಕ್ರಮ ಕೈಗೊಂಡಿದ್ದು, 2.5 ಲಕ್ಷ ರೂ. ಪ್ರೋತ್ಸಾಹಧನವನ್ನು ನೀಡಲಿದೆ.

ಇಷ್ಟುದಿನ ದಲಿತ ಅಂತರ್ಜಾತಿ ವಿವಾಹವಾದ ವಾರ್ಷಿಕ 5 ಲಕ್ಷ ರೂ.ವರೆಗಿನ ಆದಾಯ ಹೊಂದಿದವರಿಗೆ ಮಾತ್ರ 2.5 ಲಕ್ಷ ರೂ. ಪ್ರೋತ್ಸಾಹಧನವನ್ನು ನೀಡಲಾಗುತ್ತಿತ್ತು. ಈ ನಿಯಮವನ್ನು ಸಡಿಲಿಸಲಾಗಿದ್ದು, ಎಲ್ಲಾ ದಲಿತ ಅಂತರ್ಜಾತಿ ವಿವಾಹಿತರಿಗೆ 2.5 ಲಕ್ಷ ರೂ. ನೀಡಲಾಗುವುದು.

ವಿವಾಹವಾಗುವ ದಂಪತಿ ಮದುವೆಯನ್ನು ಹಿಂದೂ ವಿವಾಹ ಕಾಯ್ದೆಯಡಿ ನೋಂದಾಯಿಸಿ, ಸಂಬಂಧಿಸಿದ ದಾಖಲೆಗಳೊಂದಿಗೆ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗೆ ಅರ್ಜಿ ಸಲ್ಲಿಸಿದಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು.

ದೇಶದ ಅನೇಕ ರಾಜ್ಯಗಳಲ್ಲಿ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ಯೋಜನೆ ಜಾರಿಗೆ ತಂದಿವೆ. ಕೇಂದ್ರ ಸರ್ಕಾರವೂ ಈ ನಿಟ್ಟಿನಲ್ಲಿ ಪ್ರೋತ್ಸಾಹಧನ ನೀಡುತ್ತಿದೆ. ಅರ್ಜಿ ಸಲ್ಲಿಸುವವರಲ್ಲಿ ಹೆಚ್ಚಿನವರು ಪೂರಕ ದಾಖಲೆಗಳನ್ನು ಸಲ್ಲಿಕೆ ಮಾಡದ ಕಾರಣ ತಿರಸ್ಕೃತಗೊಂಡಿವೆ.

ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಒಂದೇ ಜಾತಿಯಲ್ಲಿ ವಿವಾಹ ನಡೆಯುತ್ತವೆ. ಯಾವ ಭಾಗದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಿ ನಡೆಯುತ್ತವೆ ಎನ್ನುವುದನ್ನು ಗುರುತಿಸುವುದು ಕಷ್ಟಸಾಧ್ಯವಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...