alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಕೇಂದ್ರ ಬಜೆಟ್ ನಲ್ಲಿ ಸಿಗಲಿದೆ ‘ಗುಡ್ ನ್ಯೂಸ್’

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಬಡ, ಮಧ್ಯಮ ವರ್ಗದ ಜನತೆಯನ್ನು ಸೆಳೆಯುವ ಸಲುವಾಗಿ ಹಲವು ಯೋಜನೆಗಳನ್ನು ಘೋಷಿಸಲು ಮುಂದಾಗಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ನೌಕರ ವರ್ಗದ ಕಡೆ ಗಮನ ಹರಿಸಿದೆ.

ಫೆಬ್ರವರಿ 1 ರಂದು ಮಂಡನೆಯಾಗಲಿರುವ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರು, 5 ಲಕ್ಷದೊಳಗಿನ ಆದಾಯ ಹೊಂದಿದವರಿಗೆ ತೆರಿಗೆ ವಿನಾಯಿತಿ ಘೋಷಿಸಲು ಸಿದ್ಧತೆ ನಡೆಸಿದ್ದಾರೆಂದು ಹೇಳಲಾಗಿದೆ.

ಹಾಲಿ ತೆರಿಗೆ ವಿನಾಯಿತಿಯ ಮಿತಿಯು 2.5 ಲಕ್ಷ ರೂಪಾಯಿಗಳಾಗಿದ್ದು, ನಂತರದ ಆದಾಯ ಹೊಂದಿದವರಿಗೆ ಶೇಕಡಾ 5 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಈ ಮಿತಿಯನ್ನು 5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಬಹಳಷ್ಟು ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...