alex Certify
ಕನ್ನಡ ದುನಿಯಾ       Mobile App
       

Kannada Duniya

ಬೀದಿನಾಯಿಗಳ ಮೇಲೆ ಹೇಯ ಕೃತ್ಯ

ಪುಣೆ: ಆಘಾತಕಾರಿ ಘಟನೆಯೊಂದರಲ್ಲಿ 4 ಬೀದಿ ನಾಯಿಗಳನ್ನು ಸಜೀವವಾಗಿ ದಹನ ಮಾಡಿ, 11 ಕ್ಕೂ  ಹೆಚ್ಚು ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ.

ಪಶ್ಚಿಮ ಪುಣೆಯ ಬನೇರ್ ನಲ್ಲಿನ ಪ್ರದೇಶದಲ್ಲಿ ತಡೆಯಲಸಾಧ್ಯವಾದ ದುರ್ವಾಸನೆ ಬಂದಿದ್ದು, ಸ್ಥಳೀಯರು ಪರಿಶೀಲಿಸಿದಾಗ, ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದೆ.

ನಾಯಿಗಳು ಹಾಗೂ ಮರಿಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದ್ದು, ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ನಾಯಿಗಳನ್ನು ಕಟ್ಟಿಹಾಕಿ ಡೀಸೆಲ್ ಸಿಂಪಡಿಸಿ ಬೆಂಕಿ ಹಚ್ಚಲಾಗಿದೆ. ನಾಯಿಗಳ ಮೃತದೇಹ ಗಮನಿಸಿದ ಸ್ಥಳೀಯರು ಪ್ರಾಣಿ ದಯಾ ಸಂಸ್ಥೆ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮೃತದೇಹದ ಮಾದರಿ ಕಳಿಸಿದ್ದಾರೆ.

ನಾಯಿಗಳನ್ನು ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಾಣಿದಯಾ ಸಂಘದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...