alex Certify
ಕನ್ನಡ ದುನಿಯಾ       Mobile App
       

Kannada Duniya

ಆತಂಕ ಮೂಡಿಸಿದೆ ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ

cheeta tirumala

ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದ ಘಟನೆಯೊಂದು ಭಕ್ತರನ್ನು ಬೆಚ್ಚಿ ಬೀಳಿಸಿದೆ. ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಲಕ್ಷಾಂತರ ಭಕ್ತರು ಭೇಟಿ ಕೊಡುತ್ತಾರೆ.

ತಿರುಪತಿಯಿಂದ ತಿರುಮಲಕ್ಕೆ ಹೋಗುವ ಬೆಟ್ಟದ ದಾರಿಯಲ್ಲಿ ಕಾಡು ಪ್ರಾಣಿಗಳಿವೆ ಎಚ್ಚರಿಕೆ ಎಂದು ಫಲಕಗಳನ್ನು ಹಾಕಲಾಗಿದೆ. ಹಾಗಾಗಿ, ಬೆಟ್ಟ ಹತ್ತುವ ಭಕ್ತರು ಗುಂಪು ಗುಂಪಾಗಿ ನಡೆದುಕೊಂಡು ಹೋಗುವುದು ರೂಢಿಯಲ್ಲಿದೆ. ಇದೀಗ ತಿರುಮಲದಲ್ಲಿನ ದೇವಾಲಯ ಸಮೀಪದ ಅತಿಥಿ ಗೃಹದ ಮೇಲೆ ಚಿರತೆಯೊಂದು ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಆಡಳಿತ ಮಂಡಳಿ ಮತ್ತು ಭಕ್ತರಲ್ಲಿ ಆತಂಕ ಮೂಡಿಸಿದೆ.

ಇಲ್ಲಿಗೆ ಬರುವ ಭಕ್ತರು ಸಿಕ್ಕ ಜಾಗಗಳಲ್ಲೇ ವಿಶ್ರಾಂತಿ ಪಡೆದುಕೊಳ್ಳುತ್ತಾರೆ. ಅಪಾರ ಸಂಖ್ಯೆಯ ಜನ ಹೊರಗೇ ಮಲಗಿರುತ್ತಾರೆ. ಹೀಗಿರುವಾಗ ಚಿರತೆ ಕಾಣಿಸಿಕೊಂಡಿರುವುದು ಆತಂಕವನ್ನು ಹೆಚ್ಚುವಂತೆ ಮಾಡಿದೆ.

ಇತ್ತೀಚೆಗಷ್ಟೇ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಸುವ ತಿರುಮಲದ ಪಾಕಶಾಲೆಯಲ್ಲಿ ಬೆಂಕಿ ದುರಂತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಇದೀಗ ಚಿರತೆ ದೇವಾಲಯ ಸಮೀಪದ ಕಟ್ಟಡದ ಮೇಲೆಯೇ ಕಾಣಿಸಿಕೊಂಡಿರುವುದು ಭಕ್ತರಲ್ಲಿ ಆತಂಕವನ್ನು ಹೆಚ್ಚಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...