alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಆತ್ಮಹತ್ಯೆ: ಉದ್ರಿಕ್ತರಿಂದ ಹಾಸ್ಟೆಲ್ ಗೆ ಬೆಂಕಿ

ಚೆನ್ನೈ: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಚೆನ್ನೈನ ಸತ್ಯಭಾಮಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರ ಕಿರುಕುಳದಿಂದ ತೆಲಂಗಾಣ ಮೂಲದ ವಿದ್ಯಾರ್ಥಿನಿ ರಾಗಾ ಮೋನಿಕಾ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಉದ್ರಿಕ್ತರು ವಿಶ್ವವಿದ್ಯಾಲಯದ ಆಡಳಿತ ಕಚೇರಿ, ಹಾಸ್ಟೆಲ್ ಗೆ ಬೆಂಕಿ ಹಚ್ಚಿದ್ದಾರೆ.

ಇದರಿಂದಾಗಿ ಹಲವು ಕಟ್ಟಡಗಳಿಗೆ ಬೆಂಕಿ ತಗುಲಿದ್ದು, ವಿಶ್ವವಿದ್ಯಾಲಯದ ಅಪಾರ ಪ್ರಮಾಣದ ಆಸ್ತಿ, ಪಾಸ್ತಿಗೆ ನಷ್ಟವಾಗಿದೆ.

5 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿವೆ. ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ತೆರಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮನವೊಲಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮತ್ತು ತರಗತಿಗಳನ್ನು ಮುಂದೂಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...