alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭಾ ಚುನಾವಣೆಗೂ ಮುನ್ನ ನಕ್ಸಲ್ ದಾಳಿ

ಛತ್ತೀಸ್ ಘಡ್  ದಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಭಾನುವಾರದಂದು ಭದ್ರತೆಗೆ ನಿಯೋಜನೆಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧರು ಗಸ್ತು ತಿರುಗುವ ವೇಳೆ ನಕ್ಸಲರು ನಾಡ ಬಾಂಬ್ ಸ್ಫೋಟಿಸಿದ್ದಾರೆ.

ಈ ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಓರ್ವ ಸಬ್ ಇನ್ಸ್ಪೆಕ್ಟರ್ ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯನ್ನು ಬಹಿಷ್ಕರಿಸಲು ನಕ್ಸಲರು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಚುನಾವಣೆ ಗೆ ಭಾರಿ ಭದ್ರತೆ ಒದಗಿಸಲಾಗಿದೆ.

ಛತ್ತೀಸ್ ಘಡ್ ವಿಧಾನಸಭೆಯ 90 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಿಗೆ ಬಿಗಿ ಭದ್ರತೆಯಲ್ಲಿ ಇಂದು ಮತದಾನ ನಡೆಯುತ್ತಿದ್ದು, ಸಾರ್ವಜನಿಕರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...