alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿ ಹೇಳಿಕೆಗೆ ದಾಖಲೆ ಸಮೇತ ಟಾಂಗ್ ಕೊಟ್ಟ ಚಿದಂಬರಂ

ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಕಣ ರಂಗೇರಿದ್ದು, ಗೆಲುವಿಗಾಗಿ ಪ್ರಮುಖ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳ ಸಮರವೇ ನಡೆದಿದೆ.

ಛತ್ತೀಸ್ಗಡದ ಅಂಬಿಕಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ನೆಹರು ಕುಟುಂಬದವರಲ್ಲದ ಉತ್ತಮ ನಾಯಕರೊಬ್ಬರನ್ನು ಐದು ವರ್ಷಗಳ ಕಾಲ ಪಕ್ಷದ ಅಧ್ಯಕ್ಷರನ್ನಾಗಿಸಿದರೆ, ಆ ಪಕ್ಷದಲ್ಲಿ ಪ್ರಜಾಪ್ರಭುತ್ವವಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ನೆಹರು ಕುಟುಂಬದವರಲ್ಲದ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. 1947 ರಿಂದ ಈವರೆಗೆ ಅಧ್ಯಕ್ಷರಾಗಿದ್ದ ಆಚಾರ್ಯ ಕೃಪಲಾನಿ, ಪಟ್ಟಾಭಿ ಸೀತಾರಾಮಯ್ಯ, ಪುರುಷೋತ್ತಮ ದಾಸ್ ಟಂಡನ್, ಯು.ಎನ್. ದೇಬರ್, ನೀಲಂ ಸಂಜೀವರೆಡ್ಡಿ, ನಿಜಲಿಂಗಪ್ಪ, ಜಗಜೀವನ್ ರಾಮ್, ಶಂಕರ್ ದಯಾಳ್ ಶರ್ಮಾ, ಪಿ.ವಿ. ನರಸಿಂಹರಾವ್, ಸೀತಾರಾಮ್ ಕೇಸರಿ ಮೊದಲಾದವರ ಹೆಸರುಗಳನ್ನು ಪಟ್ಟಿ ಮಾಡಿದ್ದಾರೆ.

ಪ್ರಧಾನಿ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ರೈತರ ಆತ್ಮಹತ್ಯೆ, ನಿರುದ್ಯೋಗ ಸಮಸ್ಯೆ, ಗೋ ರಕ್ಷಕರ ಅಟ್ಟಹಾಸಗಳ ಕುರಿತು ಈಗಲಾದರೂ ಮಾತನಾಡಬಲ್ಲರೇ ಎಂದು ಪ್ರಶ್ನಿಸಿರುವ ಚಿದಂಬರಂ, ಕಾಂಗ್ರೆಸ್ ಅಧ್ಯಕ್ಷರ ಕುರಿತು ಕಳವಳ ವ್ಯಕ್ತಪಡಿಸಿ ಅದಕ್ಕಾಗಿ ಬಹಳಷ್ಟು ಸಮಯವನ್ನು ಮೀಸಲಾಗಿಟ್ಟ ಪ್ರಧಾನಿಯವರಿಗೆ ಕೃತಜ್ಞನಾಗಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...