alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿಗೆ ಸೈರನ್ ಅಳವಡಿಸಿಕೊಂಡಿದ್ದನ್ನು ಕೇಳಿದ್ದಕ್ಕೆ ನಾನು ಸಿಎಂ ಮೈದುನ ಎಂದ…!

ಅನಧಿಕೃತವಾಗಿ ಸೈರನ್ ಅಳವಡಿಸಿದ ಎಸ್‌ಯುವಿ ಕಾರನ್ನು ಮಧ್ಯಪ್ರದೇಶ ಭೋಪಾಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತಾನು ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಮೈದುನ ಎಂದು ಕಾರು ಚಾಲಕ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ.

ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಾಹನವನ್ನು ತಡೆದ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಚಾಲಕ, ನಿಮ್ಮನ್ನು ನೀವು ಏನೆಂದುಕೊಂಡಿದ್ದೀರಿ ಎಂದು ಪೊಲೀಸರನ್ನೇ ಪ್ರಶ್ನಿಸಿದ್ದಾನೆ.

ನವಂಬರ್‌ನಲ್ಲಿ ಮಧ್ಯಪ್ರದೇಶದ ಚುನಾವಣೆ ಇರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅನಧಿಕೃತ ಸೈರನ್ ಇರುವ ವಾಹನಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ನೀಡಿತ್ತು.

ಪೊಲೀಸರ ಕಾರ್ಯಾಚರಣೆ ವೇಳೆ ಕಾರಿನಲ್ಲಿ ಇಬ್ಬರು ಮಹಿಳೆಯರೂ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಚೌಹಾಣ್‌, ಮಧ್ಯಪ್ರದೇಶದಲ್ಲಿ ಕೋಟಿ ಜನ ತಂಗಿಯಂದಿರು ನನಗಿದ್ದಾರೆ. ಹಾಗಾಗಿ ಅನೇಕ ಮಂದಿ ಮೈದುನರಾಗುತ್ತಾರೆ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಲ್ಲಿ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ 128 ವಾಹನಗಳಲ್ಲಿದ್ದ ಅನಧಿಕೃತವಾಗಿ ಸೈರನ್ ಅಳವಡಿಸಿರುವ ವಾಹನಗಳು ಸಿಕ್ಕಿದೆ. ಸುಮಾರು 12 ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ. 20 ಭಾಗಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...