alex Certify
ಕನ್ನಡ ದುನಿಯಾ       Mobile App
       

Kannada Duniya

ಮೆಗಾಸ್ಟಾರ್ ಚಿರಂಜೀವಿ ಅರೆಸ್ಟ್…!

Chiranjeevi-Arrested-at-Rajahmundry-Airport

ಹೈದರಾಬಾದ್: ಕೇಂದ್ರದ ಮಾಜಿ ಸಚಿವ, ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಕಾಪು ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಿದ ಚಿರಂಜೀವಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ.

ಚಿರಂಜೀವಿ ಕಾಪು ಸಮುದಾಯಕ್ಕೆ ಸೇರಿದವರಾಗಿದ್ದು, ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಬೇಕೆಂದು ಕಾಪು ಸಮುದಾಯ ಕಳೆದ ವಾರದಿಂದ ಉಗ್ರವಾಗಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಸಮುದಾಯದ ಹೋರಾಟಕ್ಕೆ ಬೆಂಬಲ ಸೂಚಿಸಿ ಹೋರಾಟದಲ್ಲಿ ಪಾಲ್ಗೊಳ್ಳಲು ಚಿರಂಜೀವಿ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ರಾಜಮಂಡ್ರಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಚಿರಂಜೀವಿ ಕಾಪು ಸಮುದಾಯದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ, ಸಮುದಾಯದಿಂದ ಸಂತಸ ವ್ಯಕ್ತವಾಗಿತ್ತು. ಅವರ ಬಂಧನದ ಸುದ್ದಿ ತಿಳಿಯುತ್ತಲೇ, ಆಕ್ರೋಶ ವ್ಯಕ್ತಪಡಿಸಿರುವ ಕಾಪು ಸಮುದಾಯ ಹಾಗೂ ಚಿರು ಅಭಿಮಾನಿಗಳು ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...