alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ವಿರೋಧಿಸಿ ಅರ್ಜಿ ಸಲ್ಲಿಸಿರುವ ವ್ಯಕ್ತಿ ಹೇಳಿದ್ದೇನು?

ಆಧಾರ್ ಕಾರ್ಡ್ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ಆಧಾರ್ ಕಾರ್ಡ್ ನ 12 ಸಂಖ್ಯೆ ಮೂಲ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಅರ್ಜಿದಾರ ದೂರಿದ್ದಾನೆ. ಆದ್ದರಿಂದ ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲವೆಂದು ಅರ್ಜಿದಾರ ಹೇಳಿದ್ದಾನೆ.

ಜಾನ್ ಅಬ್ರಾಹಂ ಎಂಬಾತ ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿದಾರ ಹಾಗೂ ಆತನ ಕುಟುಂಬ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು. ಅವರಿಗೆ ಆಧಾರ್ ನಿಂದ ವಿನಾಯಿತಿ ನೀಡಬೇಕು. ಇಲ್ಲವಾದ್ರೆ ಅವ್ರ ಸಾಂವಿಧಾನಿಕ ಹಕ್ಕು ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ವಾದಿಸಿದ್ದಾರೆ.

66 ಪವಿತ್ರ ಪುಸ್ತಕಗಳನ್ನು ಆಧಾರವಾಗಿ ನೀಡಿ ಹೆಗ್ಡೆ ವಾದ ಮಂಡಿಸಿದ್ದಾರೆ. ಆಧಾರ್ ಕಾರ್ಡ್ ಇಲ್ಲ ಎನ್ನುವ ಕಾರಣಕ್ಕೆ ಅರ್ಜಿದಾರನ ಮಗನಿಗೆ ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಅಡ್ಮಿಷನ್ ಸಿಕ್ಕಿಲ್ಲವಂತೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಧಾರ್ಮಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ.

ಎಲ್ಲ ಕ್ರಿಶ್ಚಿಯನ್ ಪರವಾಗಿ ನಾನು ಅರ್ಜಿ ಸಲ್ಲಿಸಿಲ್ಲ. ಎಲ್ಲರನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಈ ಪ್ರಕರಣ ನೋಡಬೇಕಾಗಿಲ್ಲ. ನನ್ನ ಆತ್ಮಸಾಕ್ಷಿ ಆಧಾರ್ ಕಾರ್ಡ್ ಗೆ ಒಪ್ಪುತ್ತಿಲ್ಲ ಎಂದು ಅರ್ಜಿದಾರ ಹೇಳಿದ್ದಾನೆ. ಈ ಪ್ರಕರಣದ ವಿಚಾರಣೆಯನ್ನು 5 ನ್ಯಾಯಾಧೀಶರ ಪೀಠ ಮಾಡ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...