alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ಯಾಂಗ್ ರೇಪ್ ಬಳಿಕ ರೈಲಿಂದ ಎಸೆದ ರಾಕ್ಷಸರು

rail-rape

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು ಚಲಿಸುವ ರೈಲಿನಿಂದ ಸಂತ್ರಸ್ಥೆಯನ್ನು ಎಸೆದಿದ್ದಾರೆ.

ಬಿಹಾರದ ಲಖಿಸೆರಾಯ್ ಜಿಲ್ಲೆಯ ಕಿಲು ಜಂಕ್ಷನ್ ಸಮೀಪ ಚಲಿಸುವ ರೈಲಿನಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ 6 ಮಂದಿ ಕಾಮುಕರು ಅತ್ಯಾಚಾರ ಎಸಗಿ ಕೆಳಗೆ ಎಸೆದಿದ್ದಾರೆ.

ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರು ಆಕೆಗೆ ಪರಿಚಿತರೇ ಆಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ವಿಚಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಗಮನಕ್ಕೂ ಬಂದಿದ್ದು, ಈ ರಾಕ್ಷಸೀಯ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...