alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಹುದ್ದೆಗೇರಲು ಶಶಿಕಲಾ ಸಿದ್ಧತೆ

sasi-kalala

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಲಯಲಲಿತಾ ಅವರ ನಿಧನದ ಬಳಿಕ, ಪಕ್ಷ ಮತ್ತು ಆಡಳಿತದ ಮೇಲೆ ಹಿಡಿತ ಸಾಧಿಸಲು ಶಶಿಕಲಾ ನಟರಾಜನ್ ಮುಂದಾಗಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೇರಲು ಶಶಿಕಲಾ ಸಿದ್ಧತೆ ನಡೆಸಿದ್ದು, ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಒಂದೆರಡು ದಿನಗಳಲ್ಲಿ ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗುವುದು. ಪ್ರಧಾನ ಕಾರ್ಯದರ್ಶಿಯಾದ ಬಳಿಕ ಶಶಿಕಲಾ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.

ಇದಕ್ಕಾಗಿ ಓ. ಪನ್ನೀರ್ ಸೆಲ್ವಂ ಮುಖ್ಯಮಂತ್ರಿ ಹುದ್ದೆಯನ್ನು ತ್ಯಾಗ ಮಾಡಬೇಕಿದೆ. ಶಶಿಕಲಾ ಮುಖ್ಯಮಂತ್ರಿಯಾಗುತ್ತಿದ್ದಂತೆ ಸಚಿವ ಸಂಪುಟವನ್ನು ಪುನರ್ ರಚನೆ ಮಾಡಲಿದ್ದು, ಕೆಲವು ಮಾಜಿ ಸಚಿವರು ಸಂಪುಟ ಸೇರಲಿದ್ದಾರೆ. ಈಗಿನ ಕೆಲವು ಸಚಿವರು ಸ್ಥಾನ ಕಳೆದುಕೊಳ್ಳಲಿದ್ದಾರೆ. ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರಿಗಾಗಿ ಪನ್ನೀರ್ ಸೆಲ್ವಂ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...