alex Certify
ಕನ್ನಡ ದುನಿಯಾ       Mobile App
       

Kannada Duniya

ಚೆನ್ನೈ ಅಪೊಲೊ ಆಸ್ಪತ್ರೆ ಬಳಿ ಭಾರೀ ಬೆಳವಣಿಗೆ

jj-cm-tn

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಣಕಾಸು ಸಚಿವ ಓ. ಪನ್ನೀರ್ ಸೆಲ್ವಂ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಪಳನಿಸ್ವಾಮಿ, ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಮ ಮನೋಹರ್ ಅವರು, ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಜಯಲಲಿತಾ ಅವರ ಆರೋಗ್ಯದ ಕುರಿತಾಗಿ ಮಾಹಿತಿ ನೀಡಿದ್ದಾರೆ. ಅಲ್ಲಿಂದ ಸಚಿವದ್ವಯರು ಅಪೊಲೊ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಅಪೊಲೊ ಆಸ್ಪತ್ರೆಗೆ ಆಗಮಿಸುವಂತೆ ಎಲ್ಲಾ ಸಚಿವರಿಗೆ ಕರೆ ಮಾಡಲಾಗಿದೆ. ಅದರಂತೆ ಸಚಿವರಾದ ಸೆಲ್ವರಾಜ್, ರಾಮಬಾಬು, ಲೋಕಸಭೆ ಡೆಪ್ಯುಟಿ ಸ್ಪೀಕರ್ ತಂಬಿ ದೊರೈ, ತಮಿಳುನಾಡು ಸ್ಪೀಕರ್ ಧನಪಾಲ್ ಮೊದಲಾದವರು ಅಪೊಲೊ ಆಸ್ಪತ್ರೆಗೆ ಆಗಮಿಸಿದ್ದಾರೆ.

ಜಯಲಲಿತಾ ಅನಾರೋಗ್ಯದ ಹಿನ್ನಲೆಯಲ್ಲಿ ಉಸ್ತುವಾರಿ ಮುಖ್ಯಮಂತ್ರಿಯನ್ನಾಗಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಅವರನ್ನು ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...