alex Certify
ಕನ್ನಡ ದುನಿಯಾ       Mobile App
       

Kannada Duniya

ಇದೇ ಮೊದಲ ಬಾರಿ ವಿದೇಶ ಪ್ರವಾಸಕ್ಕೆ ಹೊರಟ ಯೋಗಿ

adityanath

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿಎಂ ಆದ್ಮೇಲೆ ಇದೇ ಮೊದಲ ಬಾರಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಆಗಸ್ಟ್ ಐದರಿಂದ ಏಳರವರೆಗೆ ಮ್ಯಾನ್ಮಾರ್ ಗೆ ಭೇಟಿ ನೀಡಲಿದ್ದಾರೆ ಆದಿತ್ಯನಾಥ್. ಪರಿಸರಕ್ಕೆ ಸಂಬಂಧಿಸಿದಂತೆ ನಡೆಯುವ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಯೋಗಿ.

ಆಗಸ್ಟ್ 5 ರಂದು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿ ನಂತ್ರ ದೆಹಲಿಯಿಂದ ನೇರವಾಗಿ ಮ್ಯಾನ್ಮಾರ್ ಗೆ ತೆರಳಲಿದ್ದಾರೆ. ಆಗಸ್ಟ್ 6 ರಂದು ನಡೆಯುವ ಪರಿಸರಕ್ಕೆ ಸಂಬಂಧಿಸಿದ ಜಾಗತಿಕ ಶಾಂತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಷನ್ ಈ ಕಾರ್ಯಾಗಾರ ಏರ್ಪಡಿಸಿದೆ.

ಆಗಸ್ಟ್ 7 ರಂದು ಯೋಗಿ ಭಾರತಕ್ಕೆ ವಾಪಸ್ ಆಗಲಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗಾಗಿ ಲಕ್ನೋದಿಂದ ಆಗಸ್ಟ್ 6ರಂದು ದೆಹಲಿಗೆ ಬರಲಿದ್ದಾರೆ ಯೋಗಿ. ಉತ್ತರ ಪ್ರದೇಶದ ಅಭಿವೃದ್ಧಿಗೆ ಪಣತೊಟ್ಟಿರುವ ಯೋಗಿ ಇದೇ ಮೊದಲ ಬಾರಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...