alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಕಾರ್ಯದರ್ಶಿಗೆ ಕಲ್ಲಿದ್ದಲು ಹಗರಣದ ಮಸಿ

coal

ಕಲ್ಲಿದ್ದಲು ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತೀರ್ಪು ಹೊರಬಿದ್ದಿದೆ. ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ ಹಾಗೂ ಇತರ ಇಬ್ಬರು ಉನ್ನತ ಅಧಿಕಾರಿಗಳು ಅಪರಾಧಿಗಳೆಂದು ಸಾಬೀತಾಗಿದೆ. ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಜಂಟಿ ಕಾರ್ಯದರ್ಶಿ ಕೆ.ಎಸ್.ಕ್ರೋಫಾ ಹಾಗೂ ನಿರ್ದೇಶಕರಾಗಿದ್ದ ಕೆಸಿ ಸಮ್ರಿಯಾ ವಿರುದ್ಧ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪವಿತ್ತು.

ಮಧ್ಯಪ್ರದೇಶ ಮೂಲದ ಗಣಿ ಕಂಪನಿಗೆ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಬಗ್ಗೆ ಗುಪ್ತಾ ವಿರುದ್ಧ ಸಿಬಿಐ ತನಿಖೆ ನಡೆಸಿತ್ತು. 2006-08ರ ವರೆಗೆ ಕಲ್ಲಿದ್ದಲು ಖಾತೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಳಿಯೇ ಇತ್ತು. ಆ ಅವಧಿಯಲ್ಲಿ ಗುಪ್ತಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಗಣಿ ಕಂಪನಿಗಳಿಂದ ಅರ್ಜಿ ಸ್ವೀಕರಿಸುವ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

812024552-hcgupta_6

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ 12 ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದೆ. ಗುಪ್ತಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ಗಣಿ ಕಂಪನಿಗಳು ಅಸಮರ್ಪಕ ಮಾಹಿತಿ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಒಟ್ಟು 40 ಕಂಪನಿಗಳಿಗೆ ಗುಪ್ತಾ ಅಕ್ರಮವಾಗಿ ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಿದ್ದಾರೆ.

 

Jobs by neuvoo.co.in

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...