alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ರೈಲು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶ್ರೀಹರಿ ಎಂದು ಗುರುತಿಸಲಾಗಿದೆ.

ಶ್ರೀಹರಿ ಹಾಗೂ ಆತನ ಸ್ನೇಹಿತರು ಟೀ ಕುಡಿಯಲು ಪೀಲಮೇಡು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ನಿಲ್ದಾಣದಲ್ಲಿ ಗೂಡ್ಸ್ ರೈಲು ನಿಂತಿದೆ. ಇದನ್ನು ಕಂಡು ಶ್ರೀಹರಿ ರೈಲಿನ ಮೇಲಿರುವ ವಿದ್ಯುತ್ ತಂತಿ ಮುಟ್ಟಲು ಮುಂದಾಗಿದ್ದಾನೆ.

ವಿದ್ಯುತ್ ತಂತಿ ಮುಟ್ಟದಂತೆ ಸ್ನೇಹಿತರು ಎಚ್ಚರಿಕೆ ನೀಡಿದ್ದಾರೆ. ಆದ್ರೆ, ಇದನ್ನು ಲೆಕ್ಕಿಸದೇ ಶ್ರೀಹರಿ ವಿದ್ಯುತ್ ತಂತಿ ಮುಟ್ಟಿ ಜೀವ ಕಳೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಘಟನೆಯ ಬಳಿಕ ಸ್ನೇಹಿತರು ರೈಲ್ವೆ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...