alex Certify
ಕನ್ನಡ ದುನಿಯಾ       Mobile App
       

Kannada Duniya

ನರೇಂದ್ರ ಮೋದಿಯವರಿಗೆ ಎದುರಾಯ್ತಾ ಸಂಕಷ್ಟ..?

modi-yoga-ap

ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಧ್ವಜಕ್ಕೆ ಅವಮಾನವೆಸಗಿದ್ದಾರೆ ಎಂದು ಆರೋಪಿಸಿ ದೆಹಲಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಮೋದಿ ಅವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಹೌದು. ದೆಹಲಿಯ ಇಂಡಿಯಾ ಗೇಟ್‌ ನಲ್ಲಿ ಯೋಗ ದಿನದಂದು ನಡೆದ ಕಾರ್ಯಕ್ರಮದ ವೇಳೆ ಮೋದಿಯವರು ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿದ್ದು ಮಾತ್ರವಲ್ಲ, ತಮ್ಮ ಅಮೆರಿಕ ಭೇಟಿ ವೇಳೆ ಅಧ್ಯಕ್ಷ ಬರಾಕ್ ಒಬಾಮಾರಿಗೆ ರಾಷ್ಟ್ರಧ್ವಜದ ಮೇಲೆ ಸಹಿ ಹಾಕಿ ನೀಡುವ ಮೂಲಕ ರಾಷ್ಟ್ರೀಯ ಧ್ವಜ ಸಂಹಿತೆ 2002 ನ್ನು ಉಲ್ಲಂಘಿಸಿದ್ದಾರೆ ಎಂದು ಆಶಿಶ್ ಶರ್ಮಾ ಎಂಬವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಈ ವರ್ತನೆಯ ಮೂಲಕ ಭಾರತದ ರಾಷ್ಟ್ರಧ್ವಜ ಸಂಹಿತೆಯ ರಾಷ್ಟ್ರಧ್ವಜಕ್ಕೆ ಅವಮಾನ ತಡೆ ಕಾಯ್ದೆ 1971 ನ್ನು ಉಲ್ಲಂಘಿಸಿದ್ದು, ಹಾಗಾಗಿ ಈ ಕುರಿತು ವಿಚಾರಣೆ ನಡೆಸುವಂತೆ ಶರ್ಮಾ, ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ದೂರನ್ನು ಸ್ವೀಕರಿಸಿರುವ ಮೆಟ್ರೋಪಾಲಿಟನ್ ನ್ಯಾಯಾಧೀಶರು ಮೇ 9 ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...