alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷಿಕರಿಗೆ ಖುಷಿ ಸುದ್ದಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿರುವ ಕೃಷಿ ಉನ್ನತಿ ಮೇಳದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಕರಿಗೆ ಸಿಹಿಯಾದ ಸುದ್ದಿಯನ್ನು ನೀಡಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕುರಿತಾಗಿ ಪ್ರತಿಪಕ್ಷಗಳು ಕೃಷಿಕರಲ್ಲಿ ಗೊಂದಲವನ್ನು ಮೂಡಿಸುತ್ತಿವೆ ಎಂದು ಆರೋಪಿಸಿದ್ದಾರೆ. ಎಲ್ಲಾ ಪ್ರಮುಖ ಬೆಳೆಗಳಿಗೆ ಎಲ್ಲಾ ಉತ್ಪಾದನಾ ವೆಚ್ಚವನ್ನು ಸೇರಿಸಿ, ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಬೆಳೆ ಉತ್ಪಾದನಾ ವೆಚ್ಚದ ಕನಿಷ್ಠ ಒಂದೂವರೆ ಪಟ್ಟು ಬೆಂಬಲ ಬೆಲೆ ನೀಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಕೃಷಿಕರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಕಲ ಕ್ರಮಗಳನ್ನು ಕೈಗೊಂಡಿದೆ. ರೈತರು ತೈಲ ಬೀಜ ಉತ್ಪಾದನೆಗೆ ಒತ್ತು ನೀಡಬೇಕು. ಯೂರಿಯಾ ಬಳಕೆಯನ್ನು ತಗ್ಗಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ರೈತರಿಗೆ ಸಿಗುವಂತಾಗಲು ರಾಜ್ಯ ಸರ್ಕಾರಗಳೊಂದಿಗೆ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಅಧಿಸೂಚಿತ ಬೆಳೆಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಈ ಕುರಿತು ಪ್ರತಿಪಕ್ಷಗಳು ಗೊಂದಲವನ್ನು ಮೂಡಿಸುತ್ತಿವೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...