alex Certify
ಕನ್ನಡ ದುನಿಯಾ       Mobile App
       

Kannada Duniya

ಗಡುವು ಮುಗಿದು 30 ನಿಮಿಷದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ….

ರಾಜ್ಯಸಭಾ ಚುನಾವಣೆ ರಂಗೇರುತ್ತಿದೆ. ಕಾಂಗ್ರೆಸ್ ನ ಮಾಜಿ ಸಂಸದ ನಾರಾಯಣಭಾಯಿ ರಥ್ವಾ ಅವರ ನಾಮಪತ್ರ ಸಲ್ಲಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಗಡುವು ಮುಗಿದು 30 ನಿಮಿಷಗಳ ಬಳಿಕ ನಾರಾಯಣಭಾಯಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರಂತೆ.

ಈ ಬಗ್ಗೆ ಬಿಜೆಪಿ ಸಂಸದ ಸುರೇಶ್ ಅಂಗಡಿ, ಲೋಕಸಭಾ ಸಚಿವಾಲಯಕ್ಕೆ ದೂರು ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕೇವಲ 45 ನಿಮಿಷಗಳಲ್ಲಿ ಸಂಸತ್ತಿನ 7 ಇಲಾಖೆಗಳಿಂದ ಯಾವುದೇ ಆಕ್ಷೇಪಣೆ ಇಲ್ಲವೆಂಬ ಪ್ರಮಾಣಪತ್ರ ಸಿಕ್ಕದ್ಹೇಗೆ ಅನ್ನೋದು ಬಿಜೆಪಿ ಪ್ರಶ್ನೆ.

ನಾಮಪತ್ರ ಸಲ್ಲಿಕೆಯ ಅವಧಿ ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಿತ್ತು, ಆದ್ರೆ ನಾರಾಯಣಭಾಯಿ 3.30ಕ್ಕೆ ನಾಮಪತ್ರ ಸಲ್ಲಿಸಿದ್ದಾರಂತೆ. ಮಾರ್ಚ್ 12ರಂದು 2.25ಕ್ಕೆ ಅವರು ಕ್ಲಿಯರೆನ್ಸ್ ಪ್ರಮಾಣಪತ್ರಕ್ಕಾಗಿ ಅವರು ಅರ್ಜಿ ಸಲ್ಲಿಸಿದ್ದರು. 3.25ಕ್ಕೆ ಎಲ್ಲಾ ಇಲಾಖೆಗಳಿಂದ ಅವರಿಗೆ ಕ್ಲಿಯರೆನ್ಸ್ ಸಿಕ್ಕಿದೆ.

ಈ ಬಗ್ಗೆ ತನಿಖೆ ನಡೆಸುವಂತೆ ಲೋಕಸಭಾ ಸ್ಪೀಕರ್ ಸೂಚಿಸಿದ್ದಾರೆ. ಚುನಾವಣಾ ಆಯೋಗಕ್ಕೂ ದೂರು ನೀಡಲು ಬಿಜೆಪಿ ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...