alex Certify
ಕನ್ನಡ ದುನಿಯಾ       Mobile App
       

Kannada Duniya

ಯು.ಪಿ. ಚುನಾವಣೆ, ಶೀಲಾ ದೀಕ್ಷಿತ್ ಹೆಸರು ಅಧಿಕೃತ ಘೋಷಣೆ

sheela dixith

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ಹೈವೋಲ್ಟೇಜ್ ಚುನಾವಣೆ ಅಖಾಡಕ್ಕೆ ಪ್ರಿಯಾಂಕ ಗಾಂಧಿ ಇಳಿಯಲಿದ್ದಾರೆ. ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತಾದರೂ, ಇದೀಗ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ರಾಜಕೀಯ ವಲಯದಲ್ಲಿ ಚುನಾವಣೆ ಚಾಣಕ್ಯ ಎಂದೇ ಬಿಂಬಿತರಾಗಿರುವ ಪ್ರಶಾಂತ್ ಕಿಶೋರ್ ಅವರ ಸಲಹೆಯಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಈಗಾಗಲೇ ಉತ್ತರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಾಲಿವುಡ್ ಹಿರಿಯ ನಟ ಹಾಗೂ ಸಂಸದ ರಾಜ್ ಬಬ್ಬರ್ ಅವರನ್ನು ನೇಮಕ ಮಾಡಲಾಗಿದೆ. ಇದೀಗ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ತಯಾರಿ ಆರಂಭಿಸಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಪಾಳೆಯದಲ್ಲಿದ್ದ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್ ನಲ್ಲಿ ಕಾಣಿಸಿಕೊಂಡಿದ್ದರು. ತಮ್ಮ ಪ್ರಯೋಗಗಳಲ್ಲಿ ಯಶಸ್ವಿಯಾಗಿರುವ ಪ್ರಶಾಂತ್ ಕಿಶೋರ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯತಂತ್ರ ರೂಪಿಸಿದ್ದು, ಅವರ ಸಲಹೆಯಂತೆಯೇ ಶೀಲಾ ದೀಕ್ಷಿತ್ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...