alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಮಣಿಸಲು `ಕೈ’ಚಾಚಿದ ಕೇಜ್ರಿವಾಲ್

ಮಿಷನ್ 2019 ಶುರುವಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ನಾಯಕರು ನಿದ್ರೆಯಿಂದ ಏಳ್ತಿದ್ದಾರೆ. ಶತ್ರುಗಳು ಮಿತ್ರರಾಗ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೈ ಮಣಿಸಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾಗಿದೆ.

ಮೂಲಗಳ ಪ್ರಕಾರ ದೆಹಲಿ, ಪಂಜಾಬ್ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್-ಆಮ್ ಆದ್ಮಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ದೆಹಲಿಯ 7 ಲೋಕಸಭೆ ಕ್ಷೇತ್ರಗಳಲ್ಲಿ ಆಮ್ ಆದ್ಮಿ ನಾಲ್ಕರಲ್ಲಿ ಹಾಗೂ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಸಾಧ್ಯತೆಯಿದೆ.

ಪಂಜಾಬಿನ 13 ಲೋಕಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿಗೆ ನಾಲ್ಕು ಕ್ಷೇತ್ರಗಳು ಸಿಗುವ ಸಾಧ್ಯತೆಯಿದೆ. 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆಗಿಳಿಯಲಿದೆ ಎಂದು ಮೂಲಗಳು ಹೇಳಿವೆ. 2014 ರಲ್ಲಿ ದೆಹಲಿಯ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿತ್ತು. ಆಮ್ ಆದ್ಮಿ ಹಾಗೂ ಕಾಂಗ್ರೆಸ್ ಗೆ ಒಂದು ಸ್ಥಾನ ಕೂಡ ಸಿಕ್ಕಿರಲಿಲ್ಲ. ಆಗಿನ ಪರಿಸ್ಥಿತಿ ಬೇರೆ. ಈಗಿನ ಪರಿಸ್ಥಿತಿ ಬೇರೆ. 2014ರಲ್ಲಿದ್ದ ಮೋದಿ ಹವಾ ಈಗಿಲ್ಲ ಎನ್ನಲಾಗ್ತಿದೆ. 2019ರಲ್ಲಿ ದೆಹಲಿಯಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಒಂದಾದ್ರೆ ಬಿಜೆಪಿ ಗೆಲುವು ಕಷ್ಟವೆಂದು ವಿಶ್ಲೇಷಕರ ಅಭಿಪ್ರಾಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...