alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕನಿಗೆ ಗೇಟ್ ಪಾಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನೀಚ್ ಆದ್ಮಿ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಗೆ ಗೇಟ್ ಪಾಸ್ ನೀಡಲಾಗಿದೆ.

ಮಣಿಶಂಕರ್ ಅಯ್ಯರ್ ನೀಡಿದ್ದ ಹೇಳಿಕೆ ಬಿರುಗಾಳಿ ಎಬ್ಬಿಸಿದ್ದು, ಪಕ್ಷದ ವಲಯದಲ್ಲೇ ಅಸಮಾಧಾನ ವ್ಯಕ್ತವಾಗಿತ್ತು. ಇದನ್ನೇ ಮೊದಲ ಹಂತದ ಚುನಾವಣೆಯ ಪ್ರಚಾರದ ಕೊನೆ ದಿನದಂದು ಸರಿಯಾಗಿಯೇ ಬಳಸಿಕೊಂಡು ಪ್ರಧಾನಿ ಮೋದಿ ಅಯ್ಯರ್ ಗೆ ತಿರುಗೇಟು ನೀಡಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ, ಅಯ್ಯರ್ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಕ್ಷಮೆ ಕೇಳಲು ಸೂಚಿಸಿದ್ದರು. ಅದರಂತೆ ಅಯ್ಯರ್, ತಮಗೆ ಹಿಂದಿ ಸರಿಯಾಗಿ ಬಾರದ ಕಾರಣ ತಪ್ಪಾಗಿದೆ ಎಂದು ಸ್ಪಷ್ಟನೆ ನೀಡುವ ಪ್ರಯತ್ನ ನಡೆಸಿದ್ದರು.

ಗುಜರಾತ್ ಚುನಾವಣೆಯಲ್ಲಿ ಅಯ್ಯರ್ ನೀಡಿದ ಹೇಳಿಕೆ ಗಂಭೀರ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಸಸ್ಪೆಂಡ್ ಮಾಡಲಾಗಿದೆ. ಶೋಕಾಸ್ ನೋಟಿಸ್ ನೀಡಿ ಅಯ್ಯರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಮೂಲಕ ಕಳೆದ ಲೋಕಸಭೆ ಚುನಾವಣೆಯಲ್ಲಿ ಆಗಿದ್ದ ತಪ್ಪನ್ನು ಮತ್ತೆ ಮರುಕಳಿಸದಂತೆ ಮಾಡಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ.

ಇದೇ ಅಯ್ಯರ್ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ‘ಚಾಯ್ ವಾಲಾ’ ಹೇಳಿಕೆಯನ್ನು ಬಿ.ಜೆ.ಪಿ. ಟ್ರಂಪ್ ಕಾರ್ಡ್ ಆಗಿ ಬಳಸಿಕೊಂಡಿತ್ತು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...