alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ಮತ್ತೊಂದು ಸಮೀಕ್ಷೆ-ಇದರಲ್ಲೂ ಅತಂತ್ರ ವಿಧಾನಸಭೆಯದ್ದೇ ನಿರೀಕ್ಷೆ

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭಾರೀ ಹಣಾಹಣಿ ನಡೆಸುತ್ತಿದ್ದು, ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಕಾಂಗ್ರೆಸ್ ಪರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಪ್ರಚಾರ ನಡೆಸಿದ್ದರೆ, ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಮೊದಲಾದವರು ಪ್ರಚಾರ ನಡೆಸಿದ್ದಾರೆ.

ಇನ್ನು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪಕ್ಷದ ವರಿಷ್ಟ ಹೆಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಮೂರೂ ಪಕ್ಷಗಳು ಈ ಬಾರಿ ಬಹುಮತ ಪಡೆದು ಸ್ವಂತ ಬಲದ ಮೇಲೆ ಅಧಿಕಾರಕ್ಕೇರುವುದಾಗಿ ಹೇಳಿಕೊಳ್ಳುತ್ತಿದ್ದರೂ ಈಗಾಗಲೇ ಪ್ರಕಟಗೊಂಡಿರುವ ಕೆಲ ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರ ರಚನೆಯ ಸಾಧ್ಯತೆಯನ್ನು ತಿಳಿಸಿವೆ. ಕಾಂಗ್ರೆಸ್ ಅತ್ಯಧಿಕ ಸ್ಥಾನ ಗಳಿಸಲಿದ್ದು, ಬಿಜೆಪಿ ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನದೊಂದಿಗೆ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಈ ಸಮೀಕ್ಷೆ ಹೇಳಿತ್ತು.

ಈಗ ಬಹಿರಂಗಗೊಂಡಿರುವ ಮತ್ತೊಂದು ಸಮೀಕ್ಷೆಯೂ ಇದೇ ಸಾಧ್ಯತೆಯನ್ನು ಹೇಳಿದ್ದು, ಇಂಡಿಯಾ ಟಿವಿ ಸಮೀಕ್ಷೆಯಂತೆ ಕಾಂಗ್ರೆಸ್ 96, ಬಿಜೆಪಿ 85, ಜೆಡಿಎಸ್ ಮತ್ತದರ ಮಿತ್ರ ಪಕ್ಷಗಳು 38 ಹಾಗೂ ಪಕ್ಷೇತರರು 4 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆ ಎಂದಿದೆ. ಮೇ 15 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಆಗ ಸಮೀಕ್ಷೆಗಳ ಭವಿಷ್ಯ ನಿಜವೋ ಸುಳ್ಳೋ ಎಂಬುದು ತಿಳಿದುಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...