alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಧನ ಬೆಲೆ ಏರಿಕೆ ಖಂಡಿಸಿ ಸೆ.10 ಕ್ಕೆ ‘ಭಾರತ್ ಬಂದ್’

ಪೆಟ್ರೋಲ್ ಬೆಲೆ 80 ರೂ. ಗಡಿ ದಾಟುತ್ತಿದ್ದಂತೆ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಕೆಂಡ ಕಾರಿದೆ.

ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರದ ವಿರುದ್ಧ ಸೆ.10 ರಂದು ಭಾರತ್ ಬಂದ್ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಸರ್ಕಾರದ ವಿರುದ್ಧದ ಈ ಹೋರಾಟಕ್ಕೆ ಕೈ ಜೋಡಿಸುವಂತೆ ಇತರೆ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಮಾಜದ ಸಂಘಟನೆಗಳಿಗೆ ಕಾಂಗ್ರೆಸ್ ಕರೆ ನೀಡಿದೆ.

ಈ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ”ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯ ಬವಣೆ ಪಡುವಂತಾಗಿದೆ. ತಕ್ಷಣವೇ ಕೇಂದ್ರೀಯ ಅಬಕಾರಿ ಸುಂಕ ಹಾಗೂ ರಾಜ್ಯಗಳ ಅತಿಯಾದ ವ್ಯಾಟ್ ಅನ್ನು ಇಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ” ಎಂದು ಹೇಳಿದರು.

ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದೂ ಇದೇ ವೇಳೆ ಸುರ್ಜೇವಾಲ ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...