alex Certify
ಕನ್ನಡ ದುನಿಯಾ       Mobile App
       

Kannada Duniya

ಕೇವಲ 250 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಕಾಂಗ್ರೆಸ್

2019 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬ್ಲೂ ಫ್ರಿಂಟ್ ಸಿದ್ಧಪಡಿಸಿದೆ. ಸ್ವಾತಂತ್ರ್ಯದ ನಂತ್ರ ಇದೇ ಮೊದಲ ಬಾರಿ ಕಾಂಗ್ರೆಸ್ ಅತಿ ಕಡಿಮೆ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ ಕೇವಲ 250 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆಯಂತೆ. ಉಳಿದ ಸ್ಥಾನಗಳನ್ನು ಮೈತ್ರಿ ಪಕ್ಷಗಳಿಗೆ ನೀಡಲಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಂತ್ರ ಈ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 44 ಕ್ಷೇತ್ರಗಳನ್ನು ಕಾಂಗ್ರೆಸ್ ಬೇರೆ ಪಕ್ಷಗಳಿಗೆ ಬಿಟ್ಟುಕೊಡುವುದಿಲ್ಲವಂತೆ. ಗೆದ್ದ 44 ಕ್ಷೇತ್ರಗಳ ಜೊತೆ ಒಟ್ಟು 250 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆಯಂತೆ. ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಅದ್ರಲ್ಲೂ ಬಿಜೆಪಿಗೆ ಸ್ಪರ್ಧೆ ನೀಡುವ ಪಕ್ಷಗಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಿದೆಯಂತೆ.

ಒಪ್ಪಂದದಲ್ಲಿ ಏರುಪೇರಾದ್ರೆ ಮುಂದೇನು ಎನ್ನುವ ಬಗ್ಗೆ ಕಾಂಗ್ರೆಸ್ ನಿರ್ಣಯ ತೆಗೆದುಕೊಳ್ಳಲಿದೆ. ಮೋದಿ ನೇತೃತ್ವದ ಬಿಜೆಪಿ ಸದೆ ಬಡಿಯುವುದು ಕಾಂಗ್ರೆಸ್ ಮೂಲ ಉದ್ದೇಶ. ಹಾಗಾಗಿ ಬಲಾಬಲವುಳ್ಳ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಗೆಲ್ಲುವ ಯತ್ನ ನಡೆಸುತ್ತಿದೆ ಕಾಂಗ್ರೆಸ್.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...