alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರ ಪ್ರದೇಶದಲ್ಲಿ ಎಸ್ಪಿ ‘ಕೈ’ ಹಿಡಿದ ಕಾಂಗ್ರೆಸ್

akhilesh-yadav-650_650x400_51469714817

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷದ ಕೈಹಿಡಿದಿದೆ. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ಯುಪಿಯಲ್ಲಿ ಎಸ್ಪಿ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಲಿದೆ ಅಂತಾ ಸ್ಪಷ್ಟಪಡಿಸಿದ್ದಾರೆ. ಸಿಎಂ ಅಖಿಲೇಶ್ ಯಾದವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆ  ಎದುರಿಸಲಿದೆ ಅಂತಾ ತಿಳಿಸಿದ್ದಾರೆ.

ಚುನಾವಣಾ ಆಯೋಗ ಸಮಾಜವಾದಿ ಪಕ್ಷದ ಸೈಕಲ್ ಚಿಹ್ನೆಯನ್ನು ಅಖಿಲೇಶ್ ಯಾದವ್ ಅವರಿಗೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿ ನಿರ್ಧಾರವನ್ನು ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಬಿಹಾರದಲ್ಲಿರುವಂತೆ ‘ಮಹಾಘಟಬಂಧನ್’ ಬಗ್ಗೆ ಕೂಡ ಚಿಂತನೆ ನಡೆಸೋದಾಗಿ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

ಉತ್ತರಪ್ರದೇಶದ ಒಟ್ಟು 403 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಹಾಗೂ ಆರ್ ಎಲ್ ಡಿ 120-125 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಸಿಎಂ ಅಭ್ಯರ್ಥಿಯಾಗಿದ್ದ ಶೀಲಾ ದೀಕ್ಷಿತ್ ಕಣದಿಂದ ಹಿಂದೆ ಸರಿಯಲಿದ್ದಾರೆ. ಈ ವಿಷಯವನ್ನು ಖುದ್ದು ಶೀಲಾ ದೀಕ್ಷಿತ್ ಪ್ರಕಟಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 11ರಿಂದ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...