alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ ನಾಯಕ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಭರಾಟೆ ಜೋರಾಗಿದೆ. ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲ ಪಕ್ಷಗಳು ಟಿಕೆಟ್ ಘೋಷಣೆ ಮಾಡಿವೆ. ಟಿಕೆಟ್ ಘೋಷಣೆಯಾಗ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಗಲಾಟೆ ಜೋರಾಗಿದೆ. ಗ್ವಾಲಿಯರ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಟಿಕೆಟ್ ಸಿಗದ ಕಾರಣ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದೆ.

ಕಾಂಗ್ರೆಸ್ ನಾಯಕ ಪ್ರೇಮ್ ಸಿಂಗ್ ಕುಶ್ವಾಹ ಗ್ವಾಲಿಯರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕಾಂಗ್ರೆಸ್ ಪ್ರೇಮ್ ಸಿಂಗ್ ಗೆ ಟಿಕೆಟ್ ನೀಡಿಲ್ಲ. ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಪ್ರೇಮ್ ಸಿಂಗ್ ನೊಂದುಕೊಂಡಿದ್ದಾರೆ. ನಂತ್ರ ಕೀಟನಾಶಕವನ್ನು ಸೇವಿಸಿದ್ದಾರೆ.

ವಾಸ್ತವವಾಗಿ ಪ್ರೇಮ್ ಸಿಂಗ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ. ಪ್ರಸ್ತುತ ಚಾಂದೇರಿ ಅಸೆಂಬ್ಲಿಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರೇಮ್ ಸಿಂಗ್ ಬೆಂಬಲಿಗರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ನಾಯಕರು ನಿರಾಕರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...