alex Certify
ಕನ್ನಡ ದುನಿಯಾ       Mobile App
       

Kannada Duniya

2 ಕ್ಷೇತ್ರಗಳಲ್ಲಿ ಸ್ಪರ್ಧೆ: ಸಿ.ಎಂ. ಗೆ ಬಿಗ್ ಶಾಕ್..!?

ವಿಧಾನಸಭೆ ಚುನಾವಣೆಗಾಗಿ ದೆಹಲಿಯಲ್ಲಿ 3 ದಿನಗಳಿಂದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿರುವ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದಾರೆ.

ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಆದರೆ, ಅನೇಕ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಅಶೋಕ್ ಖೇಣಿ ಅವರ ಬದಲಿಗೆ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅಳಿಯ ಚಂದ್ರಸಿಂಗ್ ಅವರಿಗೆ ಟಿಕೆಟ್ ನೀಡುವಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಅಶೋಕ್ ಖೇಣಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವಲಸಿಗರಿಗೆ ಟಿಕೆಟ್ ನೀಡುವುದರಿಂದ ಇಷ್ಟು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದವರಿಗೆ ಅನ್ಯಾಯವಾಗುತ್ತದೆ ಎಂಬುದು ಖರ್ಗೆಯವರ ಅಭಿಪ್ರಾಯವಾಗಿದೆ. ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾಗಿರುವ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿದೆ. ಸಿ.ಎಂ. 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೂ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂಬ ಅಭಿಪ್ರಾಯ ಕೇಳಿ ಬಂದಿದೆ. ಎಲ್ಲರೂ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿ ಎಂಬ ಸಲಹೆ ಕೂಡ ಕೇಳಿ ಬಂದಿದೆ.

ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳು ಕ್ಷೇತ್ರಗಳ ಆಯ್ಕೆ ವಿಚಾರದಲ್ಲಿ ಹಲವು ಸಲಹೆ, ಸೂಚನೆ ಕೇಳಿ ಬಂದಿದ್ದು, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಇನ್ನು ಬಾದಾಮಿ ಕ್ಷೇತ್ರವನ್ನು ಸಿ.ಎಂ.ಗೆ ಬಿಟ್ಟುಕೊಡಲು ಶಾಸಕ ಚಿಮ್ಮನಕಟ್ಟಿ ವಿರೋಧ ವ್ಯಕ್ತಪಡಿಸಿದ್ದು, ತಾವೇ ಸ್ಪರ್ಧಿಸುವುದಾಗಿ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...