alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಾಕಾಂಕ್ಷಿ ‘ಕೈ’ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಶಾಸಕರುಗಳು, ಸರಣಿ ಸಭೆಗಳನ್ನು ನಡೆಸುವ ಮೂಲಕ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು.

ಒಂದು ಹಂತದಲ್ಲಿ ಶಾಸಕರುಗಳ ಬೇಡಿಕೆಗೆ ಮಣಿದಂತೆ ಕಂಡುಬಂದ ಹೈಕಮಾಂಡ್, ಖಾಲಿ ಉಳಿದಿರುವ ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಹಿರಿಯ ಶಾಸಕರನ್ನು ಸಚಿವರನ್ನಾಗಿ ಮಾಡುವ ಇರಾದೆ ಹೊಂದಿತ್ತು.

ಆದರೆ ಇದೀಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಏಕಕಾಲಕ್ಕೆ ನಡೆಸಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಬಳಿ ಇನ್ನೂ 6 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಒಂದು ವೇಳೆ ಮೂರ್ನಾಲ್ಕು ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿದರೆ ಅವಕಾಶ ವಂಚಿತರು ಬಂಡಾಯವೇಳಬಹುದು ಎಂಬ ಕಾರಣಕ್ಕೆ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡದಿರಲು ನಿರ್ಧರಿಸಲಾಗಿದೆ. ನಿಗಮ- ಮಂಡಳಿಗಳಿಗೆ ಸಚಿವ ಸ್ಥಾನ ವಂಚಿತ ಶಾಸಕರುಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದರೆ ಅತೃಪ್ತಿ ಶಮನವಾಗಬಹುದೆಂಬ ಲೆಕ್ಕಾಚಾರ ಹೈಕಮಾಂಡ್ ನದ್ದಾಗಿದ್ದು, ಇದರಿಂದಾಗಿ ಸಚಿವ  ಸ್ಥಾನಾಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...