alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ವಿರುದ್ಧ ಎಎಪಿ ನಾಯಕರ ಮುನಿಸು

ಗುರುವಾರ ನಡೆಯುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಿಂದ ದೂರ ಉಳಿಯಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಕಾಂಗ್ರೆಸ್, ಎಎಪಿಯ ಒಂದು ಷರತ್ತು ಕಡೆಗಣಿಸಿದ್ದಕ್ಕಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.

ಜೆಡಿಯು ಸದಸ್ಯ ಹರಿವಂಶ್ ನಾರಾಯಣ್ ಸಿಂಗ್ ಅವರು ಬಿಜೆಪಿ ನೇತೃತ್ವದ ಎನ್.ಡಿ.ಎ. ಅಭ್ಯರ್ಥಿಯಾಗಿದ್ದಾರೆ.  ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಅಭ್ಯರ್ಥಿಗೆ ಬೆಂಬಲ‌ ನೀಡುವಂತೆ ಕೋರಿದ್ದರು.

ಆದರೆ ಎಎಪಿ ಮುಖಂಡ ಮತ್ತು ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಟ್ವೀಟ್ ಮಾಡಿ, ಜೆಡಿಯು ಅಭ್ಯರ್ಥಿಯನ್ನು ಬೆಂಬಲಿಸಲು ಸಾಧ್ಯವಿಲ್ಲ. ನಮಗೆ ಬೇರೆ ಆಯ್ಕೆಯೂ ಇಲ್ಲ ಎಂದು ಅಭಿಪ್ರಾಯ ನೀಡಿದ್ದಾರೆ. ಈ ಮೂಲಕ ಚುನಾವಣೆ ಬಹಿಷ್ಕರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ತಬ್ಬಿಕೊಳ್ಳುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಅಭ್ಯರ್ಥಿಗಾಗಿ ನಮ್ಮ ಪಕ್ಷದ ಮುಖ್ಯಸ್ಥರನ್ನು ಕೋರಲಿಲ್ಲವೇಕೆ ಎಂಬ ಪ್ರಶ್ನೆ ಎತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...