alex Certify
ಕನ್ನಡ ದುನಿಯಾ       Mobile App
       

Kannada Duniya

ಗಾಳಿಯಲ್ಲಿ ಗುಂಡು ಹಾರಿಸಿ ಸಿಕ್ಕಿಬಿದ್ದ ಕಾಂಗ್ರೆಸ್ ಶಾಸಕನ ಪುತ್ರರು

ಸಂಗೀತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಶಾಸಕರೊಬ್ಬರ ಇಬ್ಬರು ಪುತ್ರರು ಸಂಭ್ರಮಾಚರಣೆಗಾಗಿ ತಮ್ಮ ಬಳಿಯಿದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ.

ಗುಜರಾತಿನಲ್ಲಿ ಈ ಘಟನೆ ನಡೆದಿದ್ದು, ಆನಂದ್ ಕ್ಷೇತ್ರದ ಶಾಸಕ ಕಾಂತಿಭಾಯ್ ಸೋಧಾರ ಪುತ್ರರಾದ ಮಹೇಂದ್ರ ಭಾಯ್ ಸೋಧಾ ಹಾಗೂ ರಂಜೀತ್ ಭಾಯ್ ಸೋಧಾ ತಮ್ಮ ಐದಾರು ಮಂದಿ ಸಂಗಡಿಗರ ಜೊತೆ ಗಾಳಿಯಲ್ಲಿ ಗುಂಡು ಹಾರಿಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು.

ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆನಂದ್ ನ ಕ್ಷತ್ರಿಯ ಸಮಾಜ ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಸಾಂಪ್ರದಾಯಿಕ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದಕ್ಕೆ ಗಾಯಕ ರಾಜ್ಬಾ ಗಾದ್ವಿಯವರನ್ನು ಆಹ್ವಾನಿಸಲಾಗಿದ್ದು, ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಸೋಧಾ ಸಹೋದರರು ಗುಂಡು ಹಾರಿಸಿದ್ದಾರೆನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸೋಧಾ ಸಹೋದರರು ಹಾಗೂ ಇತರೆ ಆರು ಮಂದಿ ವಿರುದ್ದ ದೂರು ದಾಖಲಿಸಿಕೊಂಡಿರುವ ಪೊಲೀಸರು ಅವರುಗಳ ಬಂಧನಕ್ಕೆ ಮುಂದಾಗಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...