alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮದ ಮುಂದೆ ಸುಪ್ರೀಂ ಜಡ್ಜ್ : ರಾಹುಲ್ ಮನೆಗೆ ಕಾಂಗ್ರೆಸ್ ನಾಯಕರು

ಮಾಧ್ಯಮಗಳ ಮುಂದೆ  ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಬರ್ತಿದ್ದಂತೆ ದೇಶದ ರಾಜಕೀಯ ಚಟುವಟಿಕೆ ಚುರುಕು ಪಡೆದಿದೆ. ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆಯಾಗ್ತಿದ್ದಂತೆ ತಕ್ಷಣ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾನೂನು ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ದೆಹಲಿಯಲ್ಲಿ ಸಭೆ ಕೂಡ ಕರೆದಿದ್ದಾರೆ. ಈ ಮಧ್ಯೆ ನ್ಯಾಯಾಂಗ ವ್ಯವಸ್ಥೆ ಮಧ್ಯೆ ಕೇಂದ್ರ ಸರ್ಕಾರ ಪ್ರವೇಶ ಮಾಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಅವರ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳಲಿ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ಹೇಳ್ತಿವೆ.

ಇತ್ತ ವಿರೋಧ ಪಕ್ಷ ಕೂಡ ಈ ವಿಷ್ಯವನ್ನು ಗಂಭೀರವಾಗಿ ಪರಿಗಣಿಸಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ನಾಯಕರು ಅಧ್ಯಕ್ಷರ ಜೊತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸುದ್ದಿಗೋಷ್ಠಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...