alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ಸಿಗರ ಕುರಿತು ‘ಶಾಕಿಂಗ್’ ಹೇಳಿಕೆ ನೀಡಿದ ಗುಲಾಂ ನಬಿ ಆಜಾದ್

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಪಕ್ಷದ ಕೆಲ ಹಿಂದೂ ಮುಖಂಡರ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದು, ಇದು ಪಕ್ಷದ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹಮದ್ ಖಾನ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗುಲಾಮ್ ನಬಿ ಆಜಾದ್, ಕಳೆದ ನಾಲ್ಕು ವರ್ಷಗಳಲ್ಲಿ ದೇಶದ ಕೋಮು ವಾತಾವರಣವೇ ಬದಲಾಗಿ ಬಿಟ್ಟಿದೆ. ಜಾತ್ಯತೀತ ಪಕ್ಷವಾಗಿರುವ ಕಾಂಗ್ರೆಸ್ ನಲ್ಲೇ ಕೆಲ ಹಿಂದೂ ಮುಖಂಡರು, ವೋಟ್ ಕೈತಪ್ಪಿ ಹೋಗಬಹುದೆಂಬ ಭಯಕ್ಕೆ ನನ್ನನ್ನು ಚುನಾವಣಾ ಪ್ರಚಾರಕ್ಕೆ ಕರೆಯಲು ಹಿಂದೇಟು ಹಾಕುತ್ತಿದ್ದಾರೆಂದು ವಿಷಾದಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿಂದೆ ಯುವ ಕಾಂಗ್ರೆಸ್ ನಲ್ಲಿದ್ದ ಕಾಲದಿಂದಲೂ ದೇಶಾದ್ಯಂತ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿಕೊಂಡು ಬಂದಿದ್ದೇನೆ. ನಾನು ಪ್ರಚಾರಕ್ಕೆ ಹೋದವರ ಪೈಕಿ ಶೇಕಡಾ 95 ಮಂದಿ ಹಿಂದೂ ಅಭ್ಯರ್ಥಿಗಳೇ ಆಗಿದ್ದರು. ಆದರೆ ಕಳೆದ ನಾಲ್ಕು ವರ್ಷದಿಂದ ನನ್ನನ್ನು ಪ್ರಚಾರಕ್ಕೆ ಕರೆದರೆ ಮತಗಳು ಕೈತಪ್ಪಿ ಹೋಗಬಹುದೆಂಬ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ ಎಂದು ಗುಲಾಂ ನಬಿ ಆಜಾದ್ ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...