alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ

ನವದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೇರಿದಂತೆ 21 ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ದೇಶಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಓಡಿಶಾ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಯಾತ್ರೆಯನ್ನು ಎರಡು ದಿನ ಮೊದಲೇ ಮೊಟಕುಗೊಳಿಸಿ, ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.

ಭಾರತ್ ಬಂದ್ ಹಿನ್ನಲೆಯಲ್ಲಿ ರಾಹುಲ್​ ಗಾಂಧಿ ಬೆಳಿಗ್ಗೆಯಿಂದಲೇ ಪ್ರತಿಭಟನೆಯ ನೇತೃತ್ವ ವಹಿಸಿ ರಸ್ತೆಗಿಳಿದಿದ್ದಾರೆ. ಪ್ರತಿಭಟನಾಕಾರರ ಜತೆ ಸೇರಿ, ರಾಹುಲ್​ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕರು ರಾಜ್​ಘಾಟ್​ನಿಂದ ರಾಮ್​ಲೀಲಾ ಮೈದಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಹಲವು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಕಾರ್ಯಕರ್ತರು, ಬೆಂಬಲಿಗರು ಭಾರತ್​​ ಬಂದ್​ಗೆ ಬೆಂಬಲ ನೀಡಿದ್ದಾರೆ.

ರ್ಯಾಲಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಫಲವಾಗಿದ್ದು, ಸರ್ಕಾರವನ್ನು ಬದಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...