alex Certify
ಕನ್ನಡ ದುನಿಯಾ       Mobile App
       

Kannada Duniya

ಲೀಕಾಯ್ತು ಸಂತಾನ ಭಾಗ್ಯ ಸ್ವಾಮೀಜಿ ವಿಡಿಯೋ

baba-parmanand

ಬಾರಬಂಕಿ: ಸಂತಾನಭಾಗ್ಯ ಕರುಣಿಸುವುದಾಗಿ ಕೆಲವು ವಂಚಕರು, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಸುವ ಎಷ್ಟೋ ಪ್ರಕರಣಗಳು ನಡೆದಿವೆ. ಉತ್ತರಪ್ರದೇಶದ ಬಾರಬಂಕಿಯಲ್ಲಿ ನಡೆದ ದೇವಮಾನವನೊಬ್ಬನ ಸ್ಟೋರಿ ಇಲ್ಲಿದೆ ನೋಡಿ.

ಮಕ್ಕಳಿಲ್ಲದ ಮಹಿಳೆಯರಿಗೆ ಸಂತಾನಭಾಗ್ಯ ಕರುಣಿಸುವುದಾಗಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದ, ಸ್ವಯಂಘೋಷಿತ ದೇವ ಮಾನವನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಮಶಂಕರ್ ತಿವಾರಿ ಅಲಿಯಾಸ್ ಪರಮಾನಂದ ಹೆಸರಿನ ಈ ವ್ಯಕ್ತಿ ಬಾರಬಂಕಿ ಸಮೀಪದ ಹರೈ ಗ್ರಾಮದಲ್ಲಿ ಆಶ್ರಮವೊಂದನ್ನು ಸ್ಥಾಪಿಸಿದ್ದ. ಅಲ್ಲಿಗೆ ಬರುತ್ತಿದ್ದ ಮಹಿಳೆಯರಿಗೆ ಸಂತಾನ ಭಾಗ್ಯ ಕರುಣಿಸುವುದಾಗಿ ಮರಳು ಮಾಡುತ್ತಿದ್ದ.

ಅಲ್ಲದೇ, ಅವರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ಅವನ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪೊಲೀಸರಿಗೆ ಗೊತ್ತಾಗಿ ಕ್ರಮ ಕೈಗೊಂಡಿದ್ದಾರೆ.

ಈತ ಹಲವು ಮಹಿಳೆಯರೊಂದಿಗೆ ರಾಸಲೀಲೆ ನಡೆಸಿದ್ದಲ್ಲದೇ, ಅದನ್ನು ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...