alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾದಕ್ಕೆ ಕಾರಣವಾಯ್ತು ‘ಕಲಿಯುಗ ಕೃಷ್ಣ’ ಪೋಸ್ಟರ್

479423-up-poster

ವಾರಣಾಸಿ: ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣದ ಪ್ರಸಂಗವನ್ನು ಆಧಾರವಾಗಿಟ್ಟುಕೊಂಡು ಉತ್ತರ ಪ್ರದೇಶದಲ್ಲಿ ರಾಜಕಾರಣಿಗಳನ್ನು ಕೌರವರ ವೇಷದಲ್ಲಿ ಚಿತ್ರಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಈ ಪೋಸ್ಟರ್ ಗೆ ವಿವಿಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಪೋಸ್ಟರ್ ನಲ್ಲಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ ಪ್ರಸಾದ್ ಮೌರ್ಯ ಶ್ರೀಕೃಷ್ಣನಾಗಿ ದ್ರೌಪದಿಯ ರಕ್ಷಣೆಗೆ ನಿಂತಿದ್ದಾರೆ. ಅದೇ ರೀತಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್, ಸಚಿವ ಆಜಂ ಖಾನ್, ಬಿ.ಎಸ್.ಪಿ. ಮುಖ್ಯಸ್ಥೆ ಮಾಯಾವತಿ, ಎಐಎಂಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರು ಕೌರವರಾಗಿ ದ್ರೌಪದಿಯ ಸೀರೆಯನ್ನು ಎಳೆಯುತ್ತಿದ್ದಾರೆ. ಹೀಗೆ ಬಿಜೆಪಿ ಅಧ್ಯಕ್ಷರನ್ನು ಕೃಷ್ಣನಾಗಿ, ವಿಪಕ್ಷಗಳ ನಾಯಕರನ್ನು ಕೌರವರಾಗಿ ಚಿತ್ರಿಸಿ ವಾರಣಾಸಿಯಲ್ಲಿ ಪೋಸ್ಟರ್ ಹಾಕಲಾಗಿದೆ.

ಸ್ಥಳೀಯ ಬಿಜೆಪಿ ಮುಖಂಡನೊಬ್ಬ ಹಾಕಿರುವ ಈ ಪೋಸ್ಟರ್ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೂ, ತಮಗೂ ಸಂಬಂಧವಿಲ್ಲ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ. ವಿರೋಧ ಪಕ್ಷಗಳ ನಾಯಕರು ಇದು ಕೀಳುಮಟ್ಟದ ಪ್ರಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಪಾರ ಜನ ವೀಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...