alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲನೆ ವೇಳೆ ಮೊಬೈಲ್ ಬಳಸಿದ ಎಸ್ಐ ಗೆ ಈ ಶಿಕ್ಷೆ

ಸಂಚಾರಿ ನಿಯಮವನ್ನು ಪಾಲಿಸದಿದ್ದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹೈದರಾಬಾದ್ ಪೊಲೀಸರು ಈಗ ತಮ್ಮದೇ ಇಲಾಖೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬೈಕ್ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದ್ದಕ್ಕೆ ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ನೀಡಿದ ತಪ್ಪಿಗಾಗಿ ಅವರುಗಳ ಪೋಷಕರನ್ನು ಹೈದರಾಬಾದ್ ಟ್ರಾಫಿಕ್ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಅಲ್ಲದೇ ವ್ಯಕ್ತಿಯೊಬ್ಬ ತಾನು ಹೆಲ್ಮೆಟ್ ಧರಿಸುವುದಿಲ್ಲವೆಂದು ರಾಜಾರೋಷವಾಗಿ ತನ್ನ ಬೈಕ್ ಹಿಂಬದಿ ಬರೆದುಕೊಂಡಿದ್ದ ಫೋಟೋವನ್ನು ಹೈದರಾಬಾದ್ ಟ್ರಾಫಿಕ್ ವಿಭಾಗದ ಅಧಿಕೃತ ಟ್ವಿಟ್ಟರ್ ನಲ್ಲಿ ಹಾಕಿ ಹೆಲ್ಮೆಟ್ ಹಾಕದ ಇತರೆ ಸವಾರರಲ್ಲೂ ಜಾಗೃತಿ ಮೂಡಿಸಲಾಗಿತ್ತು.

ಈ ಸಂದರ್ಭದಲ್ಲಿ ಹಲವು ಟ್ವಿಟ್ಟರ್ ಬಳಕೆದಾರರು, ಪೊಲೀಸರೇ ಟ್ರಾಫಿಕ್ ನಿಯಮ ಉಲ್ಲಂಘಿಸಿರುವ ಹಲವು ಫೋಟೋಗಳನ್ನು ಹಾಕಿ ಇದನ್ನು ಟ್ರಾಫಿಕ್ ಪೊಲೀಸರ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ಟ್ರಾಫಿಕ್ ಪೊಲೀಸರು, ಕಾನೂನು ಎಲ್ಲರಿಗೂ ಒಂದೇ. ಆ ಪೊಲೀಸರಿಗೂ ದಂಡ ವಿಧಿಸಲಾಗಿದೆ ಎಂದು ರಶೀದಿಯನ್ನೂ ಪೋಸ್ಟ್ ಮಾಡಿದ್ದರು. ಇದೀಗ ಮತ್ತೊಬ್ಬ ಸಬ್ ಇನ್ಸ್ ಪೆಕ್ಟರ್ ಟ್ರಾಫಿಕ್ ನಿಯಮ ಉಲ್ಲಂಘಿಸಿ ಸಿಕ್ಕಿ ಬಿದ್ದಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ನರಸಿಂಹ ನಾಯ್ಕ್, ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿರುವ ವೇಳೆ ಹೆಲ್ಮೆಟ್ ಒಳಗೆ ಮೊಬೈಲ್ ಇರಿಸಿಕೊಂಡು ಮಾತನಾಡುತ್ತಿದ್ದರು. ಇದನ್ನು ಗಮನಿಸಿದವರೊಬ್ಬರು ಫೋಟೋ ತೆಗೆದು ಟ್ವಿಟ್ಟರ್ ನಲ್ಲಿ ಹಾಕಿದ್ದು, ಇದು ವೈರಲ್ ಆಗುತ್ತಿದ್ದಂತೆಯೇ ಎಸ್ಐ ನರಸಿಂಹ ನಾಯ್ಕ್ ಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಪುಂಜಘಟ್ಟ ಠಾಣೆಯಿಂದ ಎತ್ತಂಗಡಿ ಮಾಡಿ ಪೊಲೀಸ್ ಕೇಂದ್ರ ಕಛೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದ್ದಕ್ಕೆ ದಂಡವನ್ನೂ ವಿಧಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...