alex Certify
ಕನ್ನಡ ದುನಿಯಾ       Mobile App
       

Kannada Duniya

ಹೋಳಿ ಆಚರಿಸಿ ಸಸ್ಪೆಂಡ್ ಆದ ಪೊಲೀಸರು..!

cops-filmed-drinking-dancing-at-gwalior-police-station-on-holi-get-suspendedಹೋಳಿ ಹಬ್ಬದಂದು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಠಾಣೆಯ ಆವರಣದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ಕಂಡಕಂಡವರಿಗೆಲ್ಲಾ ಮದ್ಯ ಕುಡಿಸಿ ಎಂಜಾಯ್ ಮಾಡಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚರಗೊಂಡ ಹಿರಿಯ ಪೊಲೀಸ್ ಅಧಿಕಾರಿಗಳು 15 ಮಂದಿ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.

ಅಂದ ಹಾಗೇ ಇಂತದೊಂದು ಘಟನೆ ನಡೆದಿರುವುದು ಮಧ್ಯಪ್ರದೇಶದ ಗ್ವಾಲಿಯರ್ ನ ಪೊಲೀಸ್ ಠಾಣೆಯಲ್ಲಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿಯೋಜನೆಗೊಂಡಿದ್ದ ಇಬ್ಬರು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 15 ಮಂದಿ ಸಿಬ್ಬಂದಿ ಅಂದು ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ.

ಅಷ್ಟೇ ಅಲ್ಲ, ಠಾಣೆ ಮುಂದೆ ಬಾಲಿವುಡ್ ಹಾಡುಗಳಿಗೆ ಸ್ಟೆಪ್ ಹಾಕಿದ ಈ ಸಿಬ್ಬಂದಿ, ಅಲ್ಲಿಗೆ ಬಂದಿದ್ದ ಹಲವರಿಗೆ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ಈ ದೃಶ್ಯಗಳನ್ನೆಲ್ಲಾ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿದ್ದು, ಇದು ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು, 15 ಮಂದಿಯನ್ನು ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...