alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಐಸಿಯು ನಲ್ಲೇ ಬಾಣಂತಿ ಮೇಲೆ ಅತ್ಯಾಚಾರ

Highest-Rape-Crime-in-Ethiopia

ಕಾಮಕ್ಕೆ ಕಣ್ಣಿಲ್ಲ ಅಂತಾರೆ. ಇಲ್ಲೊಬ್ಬ ವಿಕೃತ ಕಾಮಾಂಧ ನಡೆಸಿದ ಕೃತ್ಯವನ್ನು ನೋಡಿದರೆ ಅದು ನಿಜ ಎನಿಸುತ್ತದೆ. ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸಿ ಬಾಣಂತಿ ಮೇಲೆ ವಿಕೃತ ಕಾಮಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಜರ್ಜರ್ ಬಹದ್ದೂರ್ ನಗರದ ಖಾಸಗಿ ಆಸ್ಪತ್ರೆಗೆ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯನ್ನು ಹೆರಿಗೆ ನೋವಿನ ಕಾರಣದಿಂದ ದಾಖಲಿಸಲಾಗಿತ್ತು. ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿ ಕೇವಲ 2 ಗಂಟೆಯಾಗಿತ್ತಷ್ಟೇ. ಐಸಿಯು ನಲ್ಲಿ ಆ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಆಸ್ಪತ್ರೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಯೊಬ್ಬ ಸೀದಾ ಐಸಿಯು ಒಳಗೆ ಹೋಗಿ ಹಸಿ ಬಾಣಂತಿ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.

ಆತ ಐಸಿಯು ಒಳಗೆ ಹೋಗಿ ಕೆಲ ಸಮಯದ ನಂತರ ಹೊರಗೆ ಬರುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪೊಲೀಸ್ ಅಧಿಕಾರಿಯ ಪತ್ನಿಯ ಮೇಲೆಯೇ ಅದರಲ್ಲೂ ಐಸಿಯು ನಲ್ಲಿ ಈ ಅಮಾನವೀಯ ಕೃತ್ಯ ನಡೆದಿರುವುದು ತಲ್ಲಣ ಮೂಡಿಸಿದ್ದು, ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...