alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಗುಂಡಿನ ದಾಳಿಗೆ ಯೋಧ, ಪತ್ನಿ ಸಾವು

Indian Border Security Force soldiers patrol near the India-Pakistan international border area at Gakhrial boder post in Akhnoor sector, about 48 kilometers from Jammu, India, Saturday, Oct. 1, 2016. India said Thursday it carried out "surgical strikes" against militants across the highly militarized frontier that divides the Kashmir region between India and Pakistan, in an exchange that escalated tensions between the nuclear-armed neighbors. (AP Photo/Channi Anand)

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆಗೈದು ಇಂದಿಗೆ 1 ವರ್ಷವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಕಾಶ್ಮೀರದಲ್ಲಿ ಸೇನೆಯ ಗಸ್ತು ಹೆಚ್ಚಿಸಲಾಗಿದೆ.

ಪೂಂಚ್ ಸೆಕ್ಟರ್ ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದೆ. ಎಲ್.ಒ.ಸಿ.ಯಲ್ಲಿ ಯೋಧ ಮತ್ತು ಆತನ ಪತ್ನಿ ಸಾವನ್ನಪ್ಪಿದ್ದಾರೆ.

ಎಲ್.ಒ.ಸಿ. ಖಾರಿ ಕರಮರಾ ಗ್ರಾಮದ ಯೋಧ ಮೊಹಮ್ಮದ್ ಶೌಕತ್ ಮತ್ತು ಅವರ ಪತ್ನಿ ಸಾಫಿಯಾ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಳಿಗ್ಗೆ 6.30 ಕ್ಕೆ ಪಾಕ್ ಸೇನೆ ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದ್ದು, ರಜೆ ಮೇಲೆ ಊರಿಗೆ ಬಂದಿದ್ದ ಶೌಕತ್ ಬಲಿಯಾಗಿದ್ದಾರೆ.

ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿದೆ. ಇನ್ನು ಬಂಡಿಪೋರಾದಲ್ಲಿ ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ಉಗ್ರರು ದಾಳಿ ಮಾಡಿದ್ದು, 5 ಮಂದಿ ಯೋಧರಿಗೆ ಗಾಯಗಳಾಗಿವೆ.

ಭದ್ರತೆ ನಡುವೆಯೂ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಸದೆಬಡಿಯಲು ಸೇನೆ ಕಾರ್ಯಾಚರಣೆ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...