alex Certify
ಕನ್ನಡ ದುನಿಯಾ       Mobile App
       

Kannada Duniya

ಸಲಿಂಗಿಗಳು ಸಂಭ್ರಮಿಸಿದ್ದಕ್ಕೆ ಇಲ್ಲಿದೆ ಕಾರಣ

salinga

ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸಲಿಂಗಿಕಾಮಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಒಂದೆಡೆ ಸೇರಿದ ಸಲಿಂಗಕಾಮಿಗಳು ಹಾಡು, ನೃತ್ಯ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೇನೆಂಬುದನ್ನು ತಿಳಿಯಲು ಮುಂದೆ ಓದಿ.

ಕೆಳಹಂತದ ನ್ಯಾಯಾಲಯ ಸಲಿಂಗಕಾಮಕ್ಕೆ ಮಾನ್ಯತೆ ನೀಡಿದ್ದನ್ನು 2013ರ ಡಿಸೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಐಪಿಸಿ 377ನೇ ವಿಧಿಯ ಬಗ್ಗೆ ಪ್ರಶ್ನಿಸಿ ಸಲಿಂಗಕಾಮಿಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್, ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಠಾಕೂರ್, ಅನಿಲ್ ದೇವ್ ಹಾಗೂ ಜಗದೀಶ್ ಸಿಂಗ್ ಅವರು ಈ ರೀತಿ ತೀರ್ಮಾನ ಕೈಗೊಂಡಿದ್ದಾರೆ.

377ನೇ ಕಾಯ್ದೆಯನ್ನು ಮರುಪರೀಲನೆ ಮಾಡಬೇಕೆಂದು ಸಲಿಂಗಕಾಮಿಗಳ ಪರವಾಗಿ ನಾಜ್ ಫೌಂಡೇಷನ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದ್ದರಿಂದ ದೇಶದ ವಿವಿಧ ಕಡೆಗಳಲ್ಲಿ ಸಂಭ್ರಮಾಚರಣೆ ನಡೆಸಿದ್ದು, ತಮಗೆ ಕಾನೂನು ಮಾನ್ಯತೆ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...